Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.: ​ಬೇಕರಿ, ಹಣ್ಣುಹಂಪಲು, ಕುಡಿಯುವ...

ದ.ಕ.: ​ಬೇಕರಿ, ಹಣ್ಣುಹಂಪಲು, ಕುಡಿಯುವ ನೀರಿನ ಘಟಕಗಳ ತಪಾಸಣೆಗೆ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 May 2017 10:10 PM IST
share
ದ.ಕ.: ​ಬೇಕರಿ, ಹಣ್ಣುಹಂಪಲು, ಕುಡಿಯುವ ನೀರಿನ ಘಟಕಗಳ ತಪಾಸಣೆಗೆ ಡಿಸಿ ಸೂಚನೆ

ಮಂಗಳೂರು, ಮೇ 3: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಆಹಾರ ತಯಾರಿಕಾ ಘಟಕಗಳನ್ನು ನಿರಂತರವಾಗಿ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಹಾರ ಸುರಕ್ಷತೆ ಕಾಯ್ದೆಯ ಜಿಲ್ಲಾಮಟ್ಟದ ಚಾಲನಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಟಲಿ ಕುಡಿಯುವ ನೀರು ಸರಬರಾಜಿನ 16 ತಯಾರಿಕಾ ಘಟಕಗಳಿವೆ. ನೀರನ್ನು ಬಾಟಲಿಯಲ್ಲಿ ಸಂಗ್ರಹಿಸಿ ಮಾರಾಟ ಮಾಡುವ ಘಟಕಗಳು ಐಎಸ್‌ಐ ಪರವಾನಿಗೆ ಹೊಂದುವುದು ಕಡ್ಡಾಯವಾಗಿದೆ. ಐಎಸ್‌ಐ ಪರವಾನಿಗೆ ಇಲ್ಲದಿದ್ದರೆ ಸ್ಥಳೀಯ ನಗರ ಅಥವಾ ಗ್ರಾಮ ಪಂಚಾಯತ್‌ಗಳು ಲೈಸನ್ಸ್ ನೀಡುವಂತಿಲ್ಲ. ಈಗಾಗಲೇ ಐಎಸ್‌ಐ ಪರವಾನಿಗೆ ಇಲ್ಲದೇ ಕಾರ್ಯಾಚರಿಸುತ್ತಿರುವ ಬಾಟಲಿ ನೀರಿನ ಘಟಕಗಳಿಗೆ ನೀಡಲಾದ ಲೈಸನ್ಸ್‌ಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು. ಈ ಸಂಬಂಧ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ಗಳಿಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಎಲ್ಲಾ ಕುಡಿಯುವ ನೀರಿನ ಪ್ಯಾಕೇಜಿಂಗ್ ಘಟಕಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಬಾಟಲಿ ನೀರಿನ ಘಟಕಗಳನ್ನು ಆಹಾರ ಸುರಕ್ಷತೆ ಅಧಿಕಾರಿಗಳು ನಿಯಮಿತವಾಗಿ ತಪಾಸಣೆ ನಡೆಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ನೀರಿನ ಸ್ಯಾಂಪಲ್ ಸಂಗ್ರಹಿಸಿ ಅದು ಕುಡಿಯಲು ಯೋಗ್ಯವಾಗಿದೆಯೇ ಹಾಗೂ ಬಾಟಲಿ ಪ್ಯಾಕೇಜಿಂಗ್ ಘಟಕ ಎಲ್ಲಾ ನಿಯಮಗಳನ್ನು ಪಾಲಿಸುತ್ತಿರುವ ಬಗ್ಗೆ ಮುಂದಿನ ಒಂದು ತಿಂಗಳೊಳಗೆ ಜಿಲ್ಲೆಯ ಎಲ್ಲಾ ಬಾಟಲಿ ನೀರಿನ ಘಟಕಗಳ ತಪಾಸಣೆ ನಡೆಸಿ ವರದಿ ನೀಡುವಂತೆ ಆಹಾರ ಸುರಕ್ಷತೆ ಅಂಕಿತ ಅಧಿಕಾರಿಗೆ ನಿರ್ದೇಶಿಸಿದರು.

ಫುಟ್‌ಪಾತ್ ತಿಂಡಿಸ್ಟಾಲ್‌ಗಳು, ಫಾಸ್ಟ್ ಫುಡ್ ಹೋಟೆಲ್‌ಗಳಲ್ಲಿ ದೊರಕುವ ತಿನಿಸುಗಳಲ್ಲಿ ವಿಪರೀತ ರಾಸಾಯನಿಕ ಕೆಮಿಕಲ್‌ಗಳನ್ನು ಬೆರಸುತ್ತಿರುವುದು ಕಂಡುಬರುತ್ತಿದೆ. ಇವುಗಳ ಬಗ್ಗೆ ನಿಗಾ ವಹಿಸಬೇಕು. ಫಾಸ್ಟ್‌ಫುಡ್ ಆಹಾರಗಳಲ್ಲಿ ವಿಪರೀತ ಬಣ್ಣ ಕಂಡುಬಂದರೆ ಅಂತಹವುಗಳನ್ನು ತಿನ್ನಬಾರದು. ಅಲ್ಲದೆ, ಸಾರ್ವಜನಿಕರಿಗೆ ಇಂತಹ ಕೆಮಿಕಲ್ ಅಂಶಗಳ ಬಗ್ಗೆ ಮತ್ತು ಆರೋಗ್ಯದ ಮೇಲೆ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಹಣ್ಣು ಹಂಪಲುಗಳ ಮೇಲೆ ರಾಸಾಯನಿಕ ಸಿಂಪಡಿಸಿ, ಮಾರುಕಟ್ಟೆಗೆ ತರುವ ಪ್ರಕರಣಗಳು ವಿಪರೀತವಾಗಿವೆ. ಈ ನಿಟ್ಟಿನಲ್ಲಿ ಹಣ್ಣು ಗೋದಾಮುಗಳ ಮೇಲೆ, ಸಗಟು ಹಣ್ಣು ವ್ಯಾಪಾರ ಕೇಂದ್ರಗಳ ತಪಾಸಣೆ ನಡೆಸಿ, ಹಣ್ಣುಗಳ ಮೇಲೆ ರಾಸಾಯನಿಕ ಅಂಶಗಳಿವೆಯೇ ಎಂಬುದನ್ನು ಪತ್ತೆ ಹಚ್ಚಬೇಕು. ಅಂತಹವುಗಳು ಕಂಡುಬಂದರೆ ಅಂತಹ ವ್ಯಾಪಾರಸ್ಥರ ವಿರುದ್ಧ ಕ್ರಮ ಜರಗಿಸಲು ಅವರು ಸೂಚಿಸಿದರು. ಅಲ್ಲದೆ, ಹೊರ ರಾಜ್ಯದಿಂದ ಬರುವ ಹಣ್ಣು ಲಾರಿಗಳನ್ನು ತಪಾಸಣೆ ನಡೆಸಿ, ಹಣ್ಣುಗಳಲ್ಲಿ ರಾಸಾಯನಿಕ ಕಂಡುಬಂದರೆ ಅಂತಹ ಲಾರಿಗಳನ್ನು ವಶಪಡಿಸಲು ಅವರು ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಬೇಕರಿಗಳಲ್ಲಿ ಮಾರಾಟ ಮಾಡುವ ಸಿಹಿ ತಿಂಡಿಗಳಲ್ಲಿ ವಿಪರೀತ ಬಣ್ಣದ ಅಂಶಗಳು ಕಂಡುಬರುತ್ತಿವೆ. ಗ್ರಾಹಕರನ್ನು ಆಕರ್ಷಿಸಲು ಸಿಹಿ ತಿಂಡಿಗಳಲ್ಲಿ ಆಕರ್ಷಕ ಕಡು ಬಣ್ಣ ಬೆರೆಸಿ ಮಾರಾಟಕ್ಕಿಡಲಾಗುತ್ತಿದೆ. ಇದು ಕೂಡಾ ಆರೋಗ್ಯಕ್ಕೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಬೇಕರಿಗಳಲ್ಲಿ ಸಿಹಿ ತಿಂಡಿಗಳನ್ನು ಆಗಿಂದಾಗ್ಗೆ ಪರೀಕ್ಷಿಸಬೇಕು. ಬಳಸಲು ಅನುಮತಿಯಿಲ್ಲದ ಬಣ್ಣಗಳು ಕಂಡುಬಂದಲ್ಲಿ ಅಂತಹ ಬೇಕರಿಗಳ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿ, ನೀರಿನ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲಾಗದು. ಹೋಟೆಲ್, ಫುಡ್ ಸ್ಟಾಲ್‌ಗಳ ಆಹಾರಗಳಲ್ಲಿ ವಿಪರೀತ ಬಣ್ಣ ಹಾಗೂ ರುಚಿ ಹೆಚ್ಚಿಸಲು ರಾಸಾಯನಿಕ ಅಂಶಗಳನ್ನು ಬೆರೆಸಿರುವುದು ಕಂಡುಬಂದಲ್ಲಿ ಸಾರ್ವಜನಿಕರು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ದೂರು ನೀಡಬೇಕು ಎಂದು ಹೇಳಿದರು.

ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ಎಚ್.ಟಿ. ರಾಜು ಮಾತನಾಡಿ, ತಾಲೂಕು ಆರೋಗ್ಯಾಧಿಕಾರಿಗಳು ಆಯಾ ತಾಲೂಕಿನ ಆಹಾರ ಸುರಕ್ಷತಾಧಿಕಾರಿಗಳಾಗಿರುತ್ತಾರೆ. ಮಂಗಳೂರು ಮಹಾನಗರಪಾಲಿಕೆ ಮತ್ತು ಪುತ್ತೂರು ತಾಲೂಕು ವ್ಯಾಪ್ತಿಗೆ ಹಿರಿಯ ಆಹಾರ ಸುರಕ್ಷತಾಧಿಕಾರಿಗಳು ಈ ಕಾಯಿದೆಯ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ. ಆಹಾರಕ್ಕೆ ಸಂಬಂಧಿಸಿದ ಪ್ರತಿಯೊಂದು ವಸ್ತುವನ್ನು ಮಾರಾಟ ಮತ್ತು ಉತ್ಪಾದಕರು ಈ ಕಾಯ್ದೆಯ ವ್ಯಾಪ್ತಿಗೆ ಒಳಪಡುತ್ತಾರೆ. ಇವರು ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಕಾಯಿದೆಯನ್ವಯ ಲೈಸನ್ಸ್ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X