Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂತಾರಾಷ್ಟ್ರೀಯ ಮಟ್ಟದ ಜ್ಞಾನ...

ಅಂತಾರಾಷ್ಟ್ರೀಯ ಮಟ್ಟದ ಜ್ಞಾನ ಕನ್ನಡದಲ್ಲಿ ಲಭ್ಯ: ಕೆ.ಎ.ದಯಾನಂದ

​ಕಣಜದ ‘ಇ-ಲೋಕ’ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ4 May 2017 6:36 PM IST
share
ಅಂತಾರಾಷ್ಟ್ರೀಯ ಮಟ್ಟದ ಜ್ಞಾನ ಕನ್ನಡದಲ್ಲಿ ಲಭ್ಯ: ಕೆ.ಎ.ದಯಾನಂದ

ಬೆಂಗಳೂರು, ಮೇ 4: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಣಜ ಅಂತರ್ಜಾಲ ತಾಣವು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿರುವ ಮಾಹಿತಿ ಹಾಗೂ ಜ್ಞಾನವನ್ನು ಕನ್ನಡ ಜನತೆಗೆ ಮುಟ್ಟಿಸುವ ನಿಟ್ಟಿನಲ್ಲಿ ‘ಇ-ಲೋಕ’ ಎಂಬ ಹೊಸ ವಿಭಾಗವನ್ನು ತೆರೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ.ದಯಾನಂದ ತಿಳಿಸಿದ್ದಾರೆ.

ಗುರುವಾರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಕಣಜ ಅಂತರ್ಜಾಲದ ‘ಇ-ಲೋಕ’ ಹೊಸ ವಿಭಾಗವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಜ್ಞಾನವು ವಿದ್ಯಾರ್ಥಿ, ಶಿಕ್ಷಕ ಹಾಗೂ ಜನಸಾಮಾನ್ಯರಿಗೆ ಸುಲಭವಾಗಿ ಸಿಗುವ ನಿಟ್ಟಿನಲ್ಲಿ ಕಣಜ ಅಂತರ್ಜಾಲವನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.

ಐದು ಉಪವಿಭಾಗ: ಕಣಜ ಅಂತರ್ಜಾಲದಲ್ಲಿ ಇ-ಲೋಕ ಎಂಬ ಹೊಸ ವಿಭಾಗವನ್ನು ತೆರೆಯಲಾಗಿದೆ. ಅದರಲ್ಲಿ ‘ಇ-ದಿನ’, ‘ಇ-ಜಾಗ’, ಇ-ದನಿ’, ‘ಇ-ದೃಶ್ಯ’ ಹಾಗೂ ‘ಇ-ಪುಸ್ತಕ’ ಎಂಬ ಉಪವಿಭಾಗಗಳನ್ನು ತೆರೆಯಲಾಗಿದ್ದು, ಇವುಗಳಲ್ಲಿ ನಾಡು, ನುಡಿ ಹಾಗೂ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ಮಾಹಿತಿ ಹಾಗೂ ಜ್ಞಾನವನ್ನು ನಾಡಿನ ಜನತೆಗೆ ಸುಲಭವಾಗಿ ಸಿಗುವಂತೆ ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.

ಇ-ದಿನ: ಕಣಜ ಅಂತರ್ಜಾಲದಲ್ಲಿ ‘ಇ-ದಿನ’ ಅತ್ಯಂತ ಪ್ರಮುಖವಾದ ವಿಭಾಗವಾಗಿದೆ. ಇತಿಹಾಸದಲ್ಲಿ ಆಗಿ ಹೋಗಿರುವ ಪ್ರತಿದಿನದ ವಿಶೇಷತೆಯ ಕುರಿತು ಮಾಹಿತಿಯನ್ನು ಜನತೆಗೆ ತಿಳಿಸುವುದಾಗಿದೆ. ಇದರಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಉತ್ತಮ ಮಾಹಿತಿ ಸಿಗುವಂತಾಗುತ್ತದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇ-ದನಿ: ಈ ವಿಭಾಗದಲ್ಲಿ ಐತಿಹಾಸಿಕ ವ್ಯಕ್ತಿಗಳ ಅನುಭವಗಳನ್ನು ಅವರ ಧ್ವನಿಗಳಲ್ಲಿಯೇ ದಾಖಲಿಸಲಾಗುವುದು. ಇದರ ಜೊತೆಗೆ ಜಾನಪದ, ತತ್ವಪದ ಸೇರಿದಂತೆ ಅಪರೂಪದ ಹಾಡುಗಳನ್ನು ದಾಖಲಿಸಲಾಗುವುದು. ಇದರಿಂದ ಮುಂದಿನ ತಲೆಮಾರಿಗೆ ಇತಿಹಾಸವನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಕಣಜ ಅಂತರ್ಜಾಲ ತಾಣದಲ್ಲಿ ಇ-ಪುಸ್ತಕ ಹೊಸ ಎಂಬ ವಿಭಾಗವನ್ನು ತೆರೆಯಲಾಗಿದೆ. ಇದರಿಂದ ನಾಡಿನ ಹಿರಿಯ ಸಾಹಿತಿಗಳ ಪುಸ್ತಕಗಳು, ಪರಿಸರ, ಭೌಗೋಳಿಕ, ಸಾಂಸ್ಕೃತಿಕ ಸೇರಿದಂತೆ ಉತ್ತಮ ಮಾಹಿತಿಯುಳ್ಳ ಪುಸ್ತಕಗಳನ್ನು ಪಿಡಿಎಫ್, ಇ-ಪಬ್ ಹಾಗೂ ಟೆಕ್ಷ್ಟ್ ರೂಪದಲ್ಲಿ ಓದುಗರಿಗೆ ಸುಲಭವಾಗಿ ದೊರೆಯುತ್ತದೆ.
-ಕೆ.ಎ.ದಯಾನಂದ , ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕಣಜದ ವಿಶೇಷತೆ
-ಕಣಜ ಅಂತರ್ಜಾಲವನ್ನು ಮೊಬೈಲ್, ಕಂಪ್ಯೂಟರ್‌ನಲ್ಲಿ ಸುಲಭವಾಗಿ ನೋಡುವ ರೀತಿಯಲ್ಲಿ ವಿನ್ಯಾಸ ಮಾಡಲಾಗಿದೆ.
 -ವಿಶ್ವದ ಎಲ್ಲ ಕ್ಷೇತ್ರದ ಜ್ಞಾನ ಹಾಗೂ ಮಾಹಿತಿ ಕನ್ನಡದಲ್ಲಿ ಓದಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X