ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
ಕಾರ್ಕಳ, ಮೇ 4: ಕಾರೊಂದು ಬೈಕ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾರ್ಕಳ- ಪಡುಬಿದ್ರೆ ರಾಜ್ಯ ಹೆದ್ದಾರಿಯ ನಿಟ್ಟೆ ಬ್ರಾಮರಿ ಬಳಿ ನಡೆದಿದೆ.
ಮೃತರನ್ನು ಹರೀಶ್ ಆಚಾರ್ಯ ಎಂದು ಗುರುತಿಸಲಾಗಿದೆ. ನಿಟ್ಟೆ ಕಡೆ ಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು ಎದುರಿನಲ್ಲಿದ್ದ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ಸವಾರ ಬೈಕ್ ಸಮೇತ ರಸ್ತೆಯ ಬಳಿಯ ಚರಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತ ಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





