Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಪಂಜಾಬ್ ಕಿಂಗ್ಸ್‌ಗೆ ಬೆಂಗಳೂರು...

ಇಂದು ಪಂಜಾಬ್ ಕಿಂಗ್ಸ್‌ಗೆ ಬೆಂಗಳೂರು ಎದುರಾಳಿ

ವಾರ್ತಾಭಾರತಿವಾರ್ತಾಭಾರತಿ4 May 2017 10:58 PM IST
share
ಇಂದು ಪಂಜಾಬ್ ಕಿಂಗ್ಸ್‌ಗೆ ಬೆಂಗಳೂರು ಎದುರಾಳಿ

ಬೆಂಗಳೂರು, ಮೇ 4: ಹತ್ತನೆ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ-ಆಫ್ ಹಂತ ತಲುಪುವ ಗುರಿ ಹಾಕಿಕೊಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಎದುರಿಸಲಿದೆ.

9 ಪಂದ್ಯಗಳಲ್ಲಿ 8 ಅಂಕ ಗಳಿಸಿರುವ ಪಂಜಾಬ್ ಅಂಕಪಟ್ಟಿಯಲ್ಲಿ ಐದನೆ ಸ್ಥಾನದಲ್ಲಿದೆ. ಮತ್ತೊಂದೆಡೆ 11 ಪಂದ್ಯಗಳ ಪೈಕಿ 8ರಲ್ಲಿ ಸೋತಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪಂಜಾಬ್ ಶುಕ್ರವಾರದ ಪಂದ್ಯವನ್ನು ಜಯಿಸಿದರೆ ಪ್ಲೇ-ಆಫ್ ಸ್ಪರ್ಧೆಯಲ್ಲಿ ಉಳಿಯಲಿದೆ. ಪಂಜಾಬ್‌ಗೆ ಶುಕ್ರವಾರದ ಪಂದ್ಯ ಹೊರತುಪಡಿಸಿ ಇನ್ನೂ 4 ಪಂದ್ಯಗಳು ಆಡಲು ಬಾಕಿಯಿದೆ.

ಪ್ಲೇ-ಆಫ್ ಆಸೆ ಕೈ ಬಿಟ್ಟಿರುವ ವಿರಾಟ್ ಕೊಹ್ಲಿ ಪಡೆ ಈಗ ಕೇವಲ ಪ್ರತಿಷ್ಠೆಗಾಗಿ ಆಡಬೇಕಾಗಿದೆ. ಕೊಹ್ಲಿ ಪಂಜಾಬ್ ವಿರುದ್ಧ ಪಂದ್ಯದಲ್ಲಿ ಹೊಸ ಆಟಗಾರರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ.

ಆರ್‌ಸಿಬಿ ಈ ವರ್ಷದ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಸ್ವತಹ ಕೊಹ್ಲಿ ಕಳಪೆ ಫಾರ್ಮ್‌ನಲ್ಲಿದ್ದಾರೆ. ಪಂಜಾಬ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಗಳಿಸಿತ್ತು. ಗ್ಲೆನ್ ಮ್ಯಾಕ್ಸ್‌ವೆಲ್ ನೇತೃತ್ವದ ಪಂಜಾಬ್ ತಂಡದಲ್ಲಿ ಹಾಶಿಮ್ ಅಮ್ಲ(315 ರನ್) ಉತ್ತಮ ಫಾರ್ಮ್‌ನಲ್ಲಿದ್ದಾರೆ. ಮಾರ್ಟಿನ್ ಗಪ್ಟಿಲ್ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮೊದಲಿನ ಲಯಕ್ಕೆ ಮರಳಿದ್ದಾರೆ.

ಪಂಜಾಬ್ ಕ್ರಿಕೆಟ್ ಅಭಿಮಾನಿಗಳು ನಾಯಕ ಮ್ಯಾಕ್ಸ್‌ವೆಲ್‌ರಿಂದ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ. ಈವರ್ಷದ ಐಪಿಎಲ್‌ನಲ್ಲಿ 9 ಪಂದ್ಯಗಳನ್ನು ಆಡಿರುವ ಮ್ಯಾಕ್ಸ್‌ವೆಲ್ ಕೇವಲ 193 ರನ್ ಗಳಿಸಿದ್ದು, ಅಜೇಯ 44 ಗರಿಷ್ಠ ವೈಯಕ್ತಿಕ ಸ್ಕೋರಾಗಿದೆ.

ಒಂದು ವೇಳೆ ಪಂಜಾಬ್ ಬ್ಯಾಟ್ಸ್‌ಮನ್‌ಗಳು ಸಂಘಟಿತ ಪ್ರದರ್ಶನ ನೀಡಿದರೆ, ಬೌಲರ್‌ಗಳಾದ ಸಂದೀಪ್ ಶರ್ಮ ಹಾಗೂ ವರುಣ್ ಆ್ಯರೊನ್ ಎದುರಾಳಿಗಳನ್ನು ನಿಯಂತ್ರಿಸಬಲ್ಲರು. 9 ಪಂದ್ಯಗಳಲ್ಲಿ 10 ವಿಕೆಟ್‌ಗಳನ್ನು ಕಬಳಿಸಿರುವ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮೇಲೆ ವಿಶ್ವಾಸವಿರಿಸಲಾಗಿದೆ.

ಮತ್ತೊಂದೆಡೆ, ಆರ್‌ಸಿಬಿ ತಂಡದ ಬ್ಯಾಟಿಂಗ್ ದಯನೀಯ ವೈಫಲ್ಯ ಕಂಡಿದ್ದು, ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ಎಬಿಡಿ ವಿಲಿಯರ್ಸ್ ಹಾಗೂ ಕೇದಾರ್ ಜಾಧವ್ ವಿಫಲರಾಗಿದ್ದಾರೆ. ಭಾರತದ ಆಟಗಾರರಾದ ಮನ್‌ದೀಪ್ ಸಿಂಗ್ ಹಾಗೂ ಸ್ಟುವರ್ಟ್ ಬಿನ್ನಿ ಭಾರೀ ನಿರಾಸೆಗೊಳಿಸಿದ್ದಾರೆ.

 ಇಬ್ಬರು ಲೆಗ್-ಸ್ಪಿನ್ನರ್‌ಗಳಾದ ಸ್ಯಾಮುಯೆಲ್ ಬದ್ರಿ(9 ವಿಕೆಟ್‌ಗಳು) ಹಾಗೂ ಯುಜ್ವೇಂದ್ರ ಚಾಹಲ್(11 ವಿಕೆಟ್) ಸಮಾಧಾನಕರ ಪ್ರದರ್ಶನ ನೀಡಿದ್ದಾರೆ. ವೇಗದ ಬೌಲರ್‌ಗಳಾದ ಎಸ್.ಅರವಿಂದ್(4), ಆಡಮ್ ಮಿಲ್ನೆ(3) ಹಾಗೂ ಅಂಕಿತ್ ಚೌಧರಿ(2) ದುಬಾರಿ ಬೌಲರ್‌ಗಳೆನಿಸಿಕೊಂಡಿದ್ದಾರೆ.

.........

 ಇಂದಿನ ಪಂದ್ಯ

ರಾಯಲ್ ಚಾಲೆಂಜರ್ಸ್‌ ಬೆಂಗಳೂರು-

ಕಿಂಗ್ಸ್ ಇಲೆವೆನ್ ಪಂಜಾಬ್

ಸಮಯ: ರಾತ್ರಿ 8:00, ಸ್ಥಳ: ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X