ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಮೂವರ ಬಂಧನ

ಬೆಂಗಳೂರು, ಮೇ 4: ಬಿಜೆಪಿ ಕಾರ್ಯಕರ್ತ ಹುಸೇನ್ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಇಲ್ಲಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಸಂಪಿಗೆಹಳ್ಳಿಯ ನಯಾಝ್, ಫಯಾಝ್ ಹಾಗೂ ಇರ್ಫಾನ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಎರಡು ಪಕ್ಷದ ಕಾರ್ಯಕರ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ, ತಾರಕಕ್ಕೇರಿ ಸಂಪಿಗೆಹಳ್ಳಿ ಸಮೀಪದ ಹೆಗಡೆನಗರದ ಬಿಜೆಪಿ ಕಾರ್ಯಕರ್ತ ಹುಸೇನ್‌ಗೆ ಚಾಕುವಿನಿಂದ ಇರಿದು ಗಂಭೀರ ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದರು.
ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.
Next Story





