ಕೃತಿಕಾರ-ಓದುಗನ ನಡುವೆ ಕಂದಕವಿದೆ: ಡಾ.ನಿರಂಜನ ವಾನಳ್ಳಿ
ಡಾ.ಎಚ್.ಜಿ.ಶ್ರೀಧರ್ ಅವರ "ಶಾಸ್ತ್ರ ಸಂಕಲ್ಪ" ಪುಸ್ತಕ ಬಿಡುಗಡೆ

ಪುತ್ತೂರು, ಮೇ 4: ಕನ್ನಡದಲ್ಲಿ ಪ್ರತಿವರ್ಷವೂ ಅಸಂಖ್ಯಾತ ಕೃತಿಗಳು ಲೋಕಾರ್ಪಣೆಗೊಳ್ಳುತ್ತಿವೆ. ಆದರೆ ಓದುಗ ವಲಯಕ್ಕೆ ಈ ಕೃತಿಗಳು ಸುಲಭವಾಗಿ ಲಭ್ಯವಾಗದಿರುವುದು ಕೃತಿಕಾರ ಮತ್ತು ಓದುಗನ ನಡುವೆ ಬಹುದೊಡ್ಡ ಕಂದಕವಾಗಿ ಪರಿಣಮಿಸಿದೆ. ಹಾಗಾಗಿ ಅನೇಕ ಪುಸ್ತಕಗಳು ಸರಕಾರದ ಸ್ವೀಕಾರಕ್ಕಷ್ಟೇ ಸೀಮಿತಗೊಳ್ಳುತ್ತಿವೆ ಎಂದು ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ನಿರಂಜನ ವಾನಳ್ಳಿ ಹೇಳಿದರು
ಪುತ್ತೂರಿನ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲ್ಲೂಕು ಘಟಕ ಮತ್ತು ಜ್ಞಾನಗಂಗಾ ಪುಸ್ತಕ ಮಳಿಗೆಯ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಪ್ತಾಹ-ಪುಸ್ತಕ ಹಬ್ಬ ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ಕನ್ನಡ ವಿಬಾಗದ ಮುಖ್ಯಸ್ಥ ಡಾ. ಎಚ್.ಜಿ. ಶ್ರೀಧರ್ ಅವರು ರಚಿಸಿರುವ "ಶಾಸ್ತ್ರ ಸಂಕಲ್ಪ" ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು
ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ತಾಳ್ತಜೆ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಬಾಕರ್ ಅತಿಥಿಯಾಗಿ ಮಾತನಾಡಿದರು.
ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಐತ್ತಪ್ಪ, ಜ್ಞಾನಗಂಗಾ ಪುಸ್ತಕ ಮಳಿಗೆಯ ಪ್ರಕಾಶ್ ಕೊಡೆಂಕಿರಿ ಇದ್ದರು. ಕೃತಿಕಾರ ಡಾ.ಎಚ್.ಜಿ.ಶ್ರೀಧರ್ ಸ್ವಾಗತಿಸಿದರು. ಕನ್ನಡ ಪ್ರಾಧ್ಯಾಪಕ ಡಾ.ಮನಮೋಹನ ಎಂ ವಂದಿಸಿದರು. ಉಪನ್ಯಾಸಕಿ ಡಾ.ಗೀತಾಕುಮಾರಿ ಟಿ ಕಾರ್ಯಕ್ರಮ ನಿರ್ವಹಿಸಿದರು.







