ಮೇ 7: ದಿ.ಮೌಲಾನ ಇ.ಎಂ. ಶಾಫಿ ಅಧ್ಯಯನ ಕೇಂದ್ರ ಹಾಗೂ ಗ್ರಂಥಾಲಯ ಲೋಕಾರ್ಪಣೆ
ಮೂಡುಬಿದಿರೆ, ಮೇ 4: ಅಂಬೇಡ್ಕರ್ ಅಭಿವೃದ್ಧಿ ಸಂಘ ಗೌತಮ್‌ನಗರ ಇದರ ಆಶ್ರಯದಲ್ಲಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಹಾಗೂ ಪುತ್ತಿಗೆ ಸಹೋದರರಿಂದ ಗೌತಮ್‌ನಗರ ಕಾನದಲ್ಲಿ ನಿರ್ಮಿಸಲಾಗಿರುವ ದಿ. ಮೌಲಾನ ಇ.ಎಂ. ಶಾಫಿ ಅಧ್ಯಯನ ಕೇಂದ್ರ ಹಾಗೂ ಗ್ರಂಥಾಲಯವು ಮೇ 7ರಂದು ಸಂಜೆ 4 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.
ರುಖಿಯಾ ಶಾಫಿ ಪುತ್ತಿಗೆ ಕೇಂದ್ರವನ್ನು ಉದ್ಘಾಟಿಸಲಿದ್ದು, ಲೋಕಾಯುಕ್ತ ಎಸ್‌ಪಿ ಅಬ್ದುಲ್ ಅಹದ್ ಪುತ್ತಿಗೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಬೆಳುವಾಯಿ ಗ್ರಾಪಂ ಅಧ್ಯಕ್ಷ ಭಾಸ್ಕರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದಲಿತ ಅಭಿವೃದ್ಧಿ ಸಮಿತಿ ಸಂಚಾಲಕ ದಾಸಪ್ಪ ಎಡಪದವು, ಗ್ರಾ.ಪಂ. ಸದಸ್ಯರಾದ ಪ್ರಕಾಶ್ ಭಂಡಾರಿ, ಫ್ಲೋರಿನ್ ಡಿಸೋಜ, ಬೆಳುವಾಯಿ ಗ್ರಾಪಂ ಮಾಜಿ ಸದಸ್ಯ ಬಾಬು ಎಸ್. ಕಾನ, ಪ್ರಗತಿಪರ ಕೃಷಿಕ ಉದಯ ದೇವಾಡಿಗ, ಅಂಬೇಡ್ಕರ್ ಅಭಿವೃದ್ಧಿ ಸಂಘದ ಅಧ್ಯಕ್ಷ ಶಶಿಕಾಂತ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





