ಪುರೋಹಿತ್ ಜಾಮೀನು ಅರ್ಜಿ - ಪ್ರತಿಕ್ರಿಯೆಗೆ ಸುಪ್ರೀಂ ಸೂಚನೆ
ಮಾಲೆಗಾಂವ್ ಸ್ಫೋಟ ಪ್ರಕರಣ

ಹೊಸದಿಲ್ಲಿ, ಮೇ 5: ಮಾಲೆಗಾಂವ್ ಸ್ಪೋಟ ಪ್ರಕರಣದ ಆರೋಪಿ ಶ್ರೀಕಾಂತ್ ಪುರೋಹಿತ್ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡಬೇಕೆಂದು ಸುಪ್ರೀಂಕೋರ್ಟ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಮಹಾರಾಷ್ಟ್ರ ಸರಕಾರಕ್ಕೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪುರೋಹಿತ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅಲ್ಲದೆ ತಮ್ಮ ಜಾಮೀನು ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂದು ಮತ್ತೊಂದು ಅರ್ಜಿ ಸಲ್ಲಿಸಿದ್ದು ಇದನ್ನು ಎಪ್ರಿಲ್ 28ರಂದು ಸುಪ್ರೀಂ ಕೋರ್ಟ್ ತಳ್ಳಿಹಾಕಿತ್ತು.
2008ರ ಮಾಲೆಗಾಂವ್ ಬಾಂಬ್‌ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾಸಿಂಗ್ ಗೆ ಜಾಮೀನು ಮಂಜೂರುಗೊಳಿಸಿದ್ದ ಸುಪ್ರೀಂಕೋರ್ಟ್, ಪುರೋಹಿತ್‌ಗೆ ಜಾಮೀನು ನಿರಾಕರಿಸಿತ್ತು.
Next Story