Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂನ್ 24-25: ಆಳ್ವಾಸ್ ಪ್ರಗತಿ ಉದ್ಯೋಗ...

ಜೂನ್ 24-25: ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

200 ಕಂಪೆನಿಗಳು ಭಾಗಿ- 15,000 ಉದ್ಯೋಗಾಕಾಂಕ್ಷಿಗಳ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ6 May 2017 12:18 PM IST
share
ಜೂನ್ 24-25: ಆಳ್ವಾಸ್ ಪ್ರಗತಿ ಉದ್ಯೋಗ ಮೇಳ

ಮಂಗಳೂರು, ಮೇ 6: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 9ನೆ ಸಾಲಿನ ‘ಆಳ್ವಾಸ್ ಪ್ರಗತಿ 2017’ ಉದ್ಯೋಗ ಮೇಳ ಜೂನ್ 24 ಮತ್ತು 25ರಂದು ನಡೆಯಲಿದೆ ಎಂದು ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ 200 ಕಂಪನಿಗಳು ಭಾಗವಹಿಸುತ್ತಿದ್ದು, 15,000 ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಕಳೆದ ವರ್ಷ 309 ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು, 1,209 ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಆಫರ್ ನೀಡಲಾಗಿತ್ತು. ಉಳಿದಂತೆ 5,525 ಅಭ್ಯರ್ಥಿಗಳನ್ನು ಕೊನೆ ಹಂತದ ಸಂದರ್ಶನಕ್ಕೆ ಆಯ್ಕೆಗೊಳಿಸಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳ ಅದರಲ್ಲೂ ಮುಖ್ಯವಾಗಿ ಪ್ರಾಮೀಣ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಆಳ್ವಾಸ್ ಪ್ರಗತಿಯ ಪ್ರಮುಖ ಉದ್ದೇಶವಾಗಿದೆ ಎಂದವರು ಹೇಳಿದರು.

ಮೇಳದಲ್ಲಿ ಮೆಡಿಕಲ್, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್, ಬೇಸಿಕ್ ಸಾಯನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಹಾಗೂ ಎಸೆಸೆಲ್ಸಿ ಸೇರಿದಂತೆ ವಿವಿಧ ಶೈಕ್ಷಣಿಕ ಅರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ವಿದ್ಯಾರ್ಹತೆ ಅನುಸಾರ ಉದ್ಯೋಗ ಕಲ್ಪಿಸಲು ಆದ್ಯತೆ ನೀಡಲಾಗುವುದು. ಮೇಳಕ್ಕಾಗಿ ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲಾಗುವುದು. ಆನ್‌ಲೈನ್ ಅರ್ಜಿಗಳ ಆಧಾರದಲ್ಲಿ ಆಳ್ವಾಸ್ ಪ್ಲೇಸ್‌ಮೆಂಟ್ ವಿಭಾಗವು ಆಸಕ್ತ ಅಭ್ಯರ್ಥಿಗಳಿಗೆ ವರ್ಷಪೂರ್ತಿ ವಿವಿಧ ಉದ್ಯೋಗಾವಕಾಶಗಳ ಮಾಹಿತಿಯನ್ನು ಒದಗಿಸಲಿದೆ.

ನೇರ ಸಂದರ್ಶನದಲ್ಲಿ ಶೇ.80ರಷ್ಟು ಕಂಪನಿಗಲು ಉದ್ಯೋಗ ಭರವಸೆಯನ್ನು ನೀಡಲಿವೆ. ಒಂದೇ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಸುಮಾರು 800 ವಿಭಾಗಗಳನ್ನು ಇದಕ್ಕಾಗಿ ಸಿದ್ಧಪಡಿಸಲಾಗಿದೆ. ಪ್ರತಿಯೊಂದು ಕಂಪನಿಗಳಿಗೂ ಪೂರ್ವಭಾವಿಯಾಗಿ ಉದ್ಯೋಗಾಕಾಂಕ್ಷಿಗಳ ಪಟ್ಟಿಯನ್ನು ಒದಗಿಸುವುದರಿಂದ ಆಯ್ಕೆ ಪ್ರಕ್ರಿಯೆ ಕ್ಷಿಪ್ರ ಹಾಗೂ ಸರಳವಾಗಿ ನಡೆಯಲಿದೆ. ಗೊಂದಲ ನಿವಾರಿಸಲು ವಿದ್ಯಾರ್ಹತೆಯ ಆಧಾರದಲ್ಲಿ ಅಭ್ಯರ್ಥಿಗಳಿಗೆ ಕಲರ್ ಕಾರ್ಡ್ ವ್ಯವಸ್ಥೆ ಮಾಡಲಾಗುತ್ತದೆ. ಮೇಳದಲ್ಲಿ ಭಾಗವಹಿಸುವ ಕಂಪನಿಗಳ ಸಿಬ್ಬಂದಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ವಿವೇಕ್ ಆಳ್ವ ವಿವರ ನೀಡಿದರು.

ಇಲ್ಲಿ ನೋಂದಾಯಿಸಿ

http://alvaspragati.com/ (Candidate Registration Page)
http://alvaspragati.com/ (Company Registration Page)
www.alvaspragati.com
placement.alvas@gmail.com

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನೋಂದಾವಣೆ ಉಚಿತವಾಗಿರುತ್ತದೆ. ಆನ್‌ಲೈನ್ ಮೂಲಕ ನೋಂದಣಿ ಮಾಡಲಿಚ್ಚಿಸುವವರು ಈ ವಿಳಾಸಕ್ಕೆ ಭೇಟಿ ನೀಡಬಹುದು.

ಅಗತ್ಯ ದಾಖಲೆಗಳು
ಆಳ್ವಾಸ್ ಪ್ರಗತಿ 2017ರಲ್ಲಿ ಭಾಗವಹಿಸುವ ಅಭ್ಯರ್ಥಿಗಳು ರೆಸ್ಯೂಮ್, 10 ಪಾಸ್‌ಪೋರ್ಟ್ ಅಳತೆಯ ಫೋಟೋಗಳು, ಅಂಕಪಟ್ಟಿಯ ನಕಲು ಪ್ರತಿಗಳು, ಆನ್‌ಲೈನ್ ರಿಜಿಸ್ಟ್ರೇಶನ್ ನಂಬರ್/ ಐಡಿಯನ್ನು ತರತಕ್ಕದ್ದು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X