Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಿಲ್ಲೆಗಳ ಪ್ರಗತಿ ಪರಿಶೀಲನೆಗೆ 2 ದಿನ...

ಜಿಲ್ಲೆಗಳ ಪ್ರಗತಿ ಪರಿಶೀಲನೆಗೆ 2 ದಿನ ಮೀಸಲಿಡಿ: ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 May 2017 6:26 PM IST
share
ಜಿಲ್ಲೆಗಳ ಪ್ರಗತಿ ಪರಿಶೀಲನೆಗೆ 2 ದಿನ ಮೀಸಲಿಡಿ: ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಮೇ 6: ಜಿಲ್ಲಾ ಪ್ರಗತಿ ಪರಿಶೀಲನೆ ಕಾರ್ಯಗಳಿಗೆ ಪ್ರತಿ ತಿಂಗಳು ಕಡ್ಡಾಯವಾಗಿ ಎರಡು ದಿನಗಳನ್ನು ಮೀಸಲಿರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ವಿವಿಧ ಇಲಾಖೆ ಪ್ರಗತಿ ಪರಿಶೀಲನೆ ಬಳಿಕ ಮಾತನಾಡಿದ ಅವರು, ಪ್ರತಿ ತಿಂಗಳೂ ಒಂದು ದಿನ ಜಿಲ್ಲೆಯ ಎಲ್ಲ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿ. ಅಂದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಿ. ಮರುದಿನ ಕ್ಷೇತ್ರ ಭೇಟಿ ನೀಡಿ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳು ಹಾಗೂ ಇಲಾಖಾ ಕಾರ್ಯ ಚಟುವಟಿಕೆಗಳ ಸಮಗ್ರ ಪರಿಶೀಲನೆ ನಡೆಸಬೇಕೆಂದು ನಿರ್ದೇಶಿಸಿದರು.

ಜಿಲ್ಲಾಧಿಕಾರಿಯಾಗಿ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಅನುಭವದ ಸದ್ಬಳಕೆಯನ್ನು ಮಾಡಿಕೊಳ್ಳಲು ತಮ್ಮನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಅಭಿವೃದ್ಧಿ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿಗದಿತ ಅವಧಿಯಲ್ಲಿ ಹಾಗೂ ನಿರೀಕ್ಷಿಸಿದಂತೆಯೆ ಅನುಷ್ಠಾನವಾಗಬೇಕು. ಅದಕ್ಕಾಗಿ ಜಿಲ್ಲೆಗಳಿಗೆ ಭೇಟಿ ನೀಡಿ, ಅವುಗಳ ಹಂತ ಹಂತದ ಪ್ರಗತಿ ಪರಿಶೀಲನೆ ನಡೆಸಿ, ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕೆಳಹಂತದ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಬೇಕು. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬದಲಾವಣೆ ಅವಶ್ಯಕತೆ ಇದ್ದಲ್ಲಿ, ಸಲಹೆ ನೀಡಿ ಎಂದು ಸಿದ್ದರಾಮಯ್ಯ ತಿಳಿಸಿದರು.

ಜಾನುವಾರು ಗಣತಿ: ಬರ ಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮ ಮಟ್ಟದಲ್ಲಿ ಜಾನುವಾರು ಗಣತಿ ನಡೆಯಬೇಕೆಂದು ಸೂಚಿಸಿದ್ದೆ. ಪ್ರತಿ ಹಳ್ಳಿಯಲ್ಲಿ ಎಷ್ಟು ದನಕರುಗಳಿವೆ? ಎಮ್ಮೆಗಳಿವೆ, ಕುರಿ-ಮೇಕೆಗಳಿವೆ? ಎಂಬ ಗ್ರಾಮವಾರು ಮಾಹಿತಿ ಕಲೆ ಹಾಕಿ. ಮೇವು ಲಭ್ಯತೆ ಎಷ್ಟಿದೆ? ಬರಗಾಲ ಮುಗಿಯುವವರೆಗೆ ಅಗತ್ಯವಿರುವ ಮೇವಿನ ಪ್ರಮಾಣ ಎಷ್ಟು? ಎಂದು ಅಂದಾಜಿಸಲು ಈಗಾಗಲೇ ನಿರ್ದೇಶನ ನೀಡಿದ್ದೇನೆ. ಗ್ರಾಮ ಲೆಕ್ಕಿಗರು, ಪಿಡಿಒ ಹಾಗೂ ಪಶು ಸಂಗೋಪನಾ ಇಲಾಖೆ ಅಧಿಕಾರಿಯನ್ನು ಒಳಗೊಂಡ ತಂಡ ಈ ಕಾರ್ಯವನ್ನು ಎಷ್ಟರ ಮಟ್ಟಿಗೆ ಮಾಡಿದೆ ಎಂಬುದರ ವಿವರ ಸಲ್ಲಿಸಿ. ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಮೇವು ಬೆಳೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಮಾನವೀಯತೆ ಸ್ಪರ್ಶ: ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಸರಕಾರಿ ಮಾನದಂಡಗಳಂತೆ ಎಲ್ಲ ಕುಟುಂಬಗಳಿಗೂ ಪರಿಹಾರ ನೀಡಲಾಗಿದೆಯೇ? ಸಂತ್ರಸ್ತ ಕುಟುಂಬಗಳಿಗೆ ಪಿಂಚಣಿ ಸೌಲಭ್ಯ ವಿಸ್ತರಿಸಲಾಗಿದೆಯೇ? ಸಂತ್ರಸ್ತರ ಅವಲಂಬಿತರಿಗೆ ಶಿಕ್ಷಣ ಒದಗಿಸುವ ಸರಕಾರದ ಭರವಸೆ ಸಾಕಾರಗೊಳ್ಳುತ್ತಿದೆಯೇ? ಸಂತ್ರಸ್ತರ ಕುಟುಂಬಗಳಿಗೆ ವೈದ್ಯಕೀಯ ಸೌಲಭ್ಯ ವಿಸ್ತರಿಸಲಾಗುತ್ತಿದೆಯೇ? ಎಂಬ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿ. ಇಂತಹ ಪ್ರಕರಣಗಳ ವಿಲೇವಾರಿಯಲ್ಲಿ ಮಾನವೀಯತೆಯ ಸ್ಪರ್ಶವಿರಲಿ ಎಂದು ಸಿದ್ದರಾಮಯ್ಯ ಸಲಹೆ ಮಾಡಿದರು.

ಸರಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚನೆ
ಮನೆಗಳ ನಿರ್ಮಾಣದಲ್ಲಿ ಕೊಪ್ಪಳ ಮೊದಲ ಸ್ಥಾನದಲ್ಲಿದೆ. ಆದರೆ ಚಿಕ್ಕಬಳ್ಳಾಪುರ 30ನೆ ಸ್ಥಾನದಲ್ಲಿದೆ. ಸರಕಾರದ ಯೋಜನೆಗಳು ಕೆಲ ಜಿಲ್ಲೆಗಳಲ್ಲಿ ನೂರಕ್ಕೆ ನೂರು ಅನುಷ್ಠಾನಗೊಂಡರೆ ಕೆಲ ಜಿಲ್ಲೆಗಳಲ್ಲಿ ನಿಗದಿತ ಗುರಿ ಸಾಧಿಸಲಾಗಿಲ್ಲ. ಇದು ಒಂದು ರೀತಿಯಲ್ಲಿ ಆಮೆ, ಮೊಲದ ಕಥೆ ನೆನಪಿಗೆ ಬರುತ್ತದೆ ಎಂದು ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ 7 ಕೆ.ಜಿ. ಅಕ್ಕಿ ಕೊಡುತ್ತಿರುವ ಬಗ್ಗೆ ಪರಿಶೀಲಿಸಿ. ಸಮರ್ಪಕ ರೀತಿಯಲ್ಲಿ ವಿತರಣೆ ಆಗುತ್ತಿದೆಯೇ? ಗುಣಮಟ್ಟದಲ್ಲಿ ವ್ಯತ್ಯಾಸವಿದೆಯೇ? ಎಂಬುದನ್ನು ಗಮನಿಸಬೇಕು ಎಂದು ಸೂಚಿಸಿದರು.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಈಶಾನ್ಯ ಕರ್ನಾಟಕದ ಜಿಲ್ಲೆಗಳಲ್ಲಿನ ಸ್ಥಳೀಯ ಸಂಸ್ಥೆಗಳಲ್ಲಿ ಕಿರಿಯ, ಸಹಾಯಕ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ಹುದ್ದೆಗಳು ಅಧಿಕ ಸಂಖ್ಯೆಯಲ್ಲಿ ಖಾತ್ರಿಯಿರುವ ಹಿನ್ನೆಲೆಯಲ್ಲಿ ಕೊರತೆಯನ್ನು ಸರಿದೂಗಿಸಲು ಸ್ಥಳೀಯ ಸಂಸ್ಥೆಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳಿಗೆ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಲು ಸೂಚಿಸಬೇಕೆಂದು ನಿರ್ದೇಶನ ನೀಡಿದರು.

ಎಸ್ಸಿ-ಎಸ್ಟಿ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶೇ.2ರಷ್ಟು ಶಿಕ್ಷೆಯಾಗುತ್ತಿಲ್ಲ. ಈ ಬಗ್ಗೆ ತನಿಖಾಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ಪ್ರತಿ ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲಿಸಬೇಕು. ತಮ್ಮ ಭೇಟಿ ವೇಳೆ ಈ ಬಗ್ಗೆ ವಿಶೇಷ ಗಮನಹರಿಸಿ. ಅರಣ್ಯ ಹಕ್ಕು ಕಾಯಿದೆ ಬಗ್ಗೆ ಕ್ರಮ ಅಗತ್ಯ ಎಂದು ಸಿದ್ದರಾಮಯ್ಯ ಸೂಚಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ, ಅಪರ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ಅಭಿವೃದ್ಧಿ ಆಯುಕ್ತ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಸಿಎಂ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ಮತ್ತು ತುಷಾರ್ ಗಿರಿನಾಥ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X