Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ಕಾಲೇಜುಗಳಲ್ಲಿ ಜಾತೀಯತೆ: ಬರಗೂರು...

ಖಾಸಗಿ ಕಾಲೇಜುಗಳಲ್ಲಿ ಜಾತೀಯತೆ: ಬರಗೂರು ರಾಮಚಂದ್ರಪ್ಪ ಆತಂಕ

"ಎಸ್ಸಿ ಎಸ್ಟಿ ಅಧ್ಯಾಪಕರೂ ಬೇಡ, ಸರಕಾರದ ಅನುದಾನವೂ ಬೇಡ"

ವಾರ್ತಾಭಾರತಿವಾರ್ತಾಭಾರತಿ6 May 2017 7:10 PM IST
share
ಖಾಸಗಿ ಕಾಲೇಜುಗಳಲ್ಲಿ ಜಾತೀಯತೆ: ಬರಗೂರು ರಾಮಚಂದ್ರಪ್ಪ ಆತಂಕ

ಬೆಂಗಳೂರು, ಮೇ 6: ರಾಜ್ಯದಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ಎಸ್ಸಿ, ಎಸ್ಟಿ ಅಧ್ಯಾಪಕರನ್ನು ನೇಮಕಾತಿ ಮಾಡಿಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಸರಕಾರದ ಅನುದಾನವನ್ನು ನಿರಾಕರಿಸಲಾಗುತ್ತಿದೆ ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಧ್ಯಾಪಕರ ಸಂಘವು ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೆ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ಅನುದಾನಕ್ಕಾಗಿ ಮುಗಿಬೀಳುತ್ತಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಮೀಸಲಾತಿ ಮೂಲಕ ಎಸ್ಸಿ, ಎಸ್ಟಿ ಸಮುದಾಯದ ಅಧ್ಯಾಪಕರನ್ನು ನೇಮಕಾತಿ ಮಾಡಿಕೊಳ್ಳಬೇಕಾಗುತ್ತದೆ ಎಂಬ ಉದ್ದೇಶದಿಂದ ಸರಕಾರದ ಅನುದಾನವನ್ನು ತಿರಸ್ಕರಿಸುತ್ತಿವೆ ಎಂದರು.

ಅನುದಾನಿತ ಕಾಲೇಜುಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸರಕಾರದ ಸ್ಪಷ್ಟ ಆದೇಶವಿದೆ. ಆದರೆ, ಬಹುತೇಕ ಕಾಲೇಜುಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಗಳು ಖಾಲಿಯಿವೆ. ಹೀಗೆ ಜಾತೀಯತೆಯನ್ನು ಮುಂದುವರೆಸಿಕೊಂಡು ಹೋಗುತ್ತಿರುವ ಕಾಲೇಜು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ತರಗತಿಯಲ್ಲಿ ತಂತ್ರಜ್ಞಾನ ಬೇಡ: ಇತ್ತೀಚಿನ ದಿನಗಳಲ್ಲಿ ವಿಜ್ಞಾನಿ, ತತ್ವಜ್ಞಾನಿಗಳ ಸ್ಥಾನವನ್ನು ತಂತ್ರಜ್ಞಾನವು ಆವರಿಸಿಕೊಂಡಿದೆ. ಆಡಳಿತಾತ್ಮಕ ವಿಷಯಗಳಲ್ಲಿ ತಂತ್ರಜ್ಞಾನ ಬಳಕೆಯಾಗಲಿ. ಆದರೆ, ತರಗತಿಯೊಳಗೆ ತಂತ್ರಜ್ಞಾನ ನುಸುಳಿದರೆ ಸೃಜನಾತ್ಮಕತೆ ನಾಶವಾಗಲಿದೆ ಎಂದು ಅವರು ಎಚ್ಚರಿಸಿದರು.

ಏಕರೂಪ ಶಿಕ್ಷಣ ಜಾರಿಗೆ ತರದಿದ್ದರೆ ಸಂವಿಧಾನವನ್ನು ಅಗೌರವಿಸಿದಂತೆ. ಅಂಗನವಾಡಿ ಹಂತದಲ್ಲಿಯೇ ಮಕ್ಕಳ ನಡುವೆ ತಾರತಮ್ಯ ಮಾಡಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿ ಕೇವಲ ಬಡವರು ಹಾಗೂ ದಲಿತರ ಹೊರತು ಬೇರೆ ಸಮುದಾಯದ ಮಕ್ಕಳು ಕಾಣ ಸಿಗುವುದಿಲ್ಲ. ಹಾಗೆಯೇ ಉನ್ನತ ಶಿಕ್ಷಣದ ಹಂತದಲ್ಲಿ ಸಾಮಾನ್ಯ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣದ ನಡುವೆ ಭಾರಿ ಕಂದಕವೇ ಏರ್ಪಟ್ಟಿದೆ. ಇಂತಹ ತಾರತಮ್ಯಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಶಿಕ್ಷಕ ಸಮುದಾಯ ಹೋರಾಟ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
-ಪ್ರೊ.ಬರಗೂರು ರಾಮಚಂದ್ರಪ್ಪ ಹಿರಿಯ ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X