Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೇಶ್ಯೆಯರ ಬಳಿ ತೆರಳುವ ಗಿರಾಕಿಗಳ...

ವೇಶ್ಯೆಯರ ಬಳಿ ತೆರಳುವ ಗಿರಾಕಿಗಳ ವಿರುದ್ಧ ದೂರು ದಾಖಲಿಸಲು ಅವಕಾಶವಿಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ6 May 2017 9:00 PM IST
share
ವೇಶ್ಯೆಯರ ಬಳಿ ತೆರಳುವ ಗಿರಾಕಿಗಳ ವಿರುದ್ಧ ದೂರು ದಾಖಲಿಸಲು ಅವಕಾಶವಿಲ್ಲ: ಹೈಕೋರ್ಟ್

ಬೆಂಗಳೂರು, ಮೇ 6: ವೇಶ್ಯೆಯರ ಬಳಿಗೆ ತೆರಳುವ ಗಿರಾಕಿಗಳ ವಿರುದ್ಧ ಅನೈತಿಕ ವ್ಯವಹಾರ ನಿಷೇಧ ಕಾಯ್ದೆ-1956ರಡಿ ವೇಶ್ಯಾವಾಟಿಕೆ ನಡೆಸಿದ ಅಥವಾ ವೇಶ್ಯಾವಾಟಿಕೆಗೆ ಪ್ರೋತ್ಸಾಹಿಸಿದ ಆರೋಪಗಳಡಿ ದೂರು ದಾಖಲಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಿಕ್ಕಿ ಬಿದ್ದಿದ್ದ ನಾಲ್ವರು ಗಿರಾಕಿಗಳ ವಿರುದ್ಧ ವೇಶ್ಯಾವಾಟಿಕೆ ನಡೆಸಿದ ಹಾಗೂ ವೇಶ್ಯಾವಾಟಿಕೆಗೆ ಪ್ರೋತ್ಸಾಹ ನೀಡಿದ ಆರೋಪಗಳಡಿ ಪೊಲೀಸರು ದೂರು ದಾಖಲಿಸಿದ್ದರು. ಪೊಲೀಸರ ಈ ಕ್ರಮ ಪ್ರಶ್ನಿಸಿ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದು, ತಮ್ಮ ವಿರುದ್ಧ ಅನೈತಿಕ ವ್ಯವಹಾರ ನಿಷೇಧ ಕಾಯ್ದೆ-1956ರಡಿ ದೂರು ದಾಖಲಿಸಲು ಸಾಧ್ಯವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

ಅರ್ಜಿದಾರರ ವಾದ ಮಾನ್ಯ ಮಾಡಿದ ನ್ಯಾಯಾಲಯ ಅವರ ವಿರುದ್ಧ ಪೊಲೀಸರು ದಾಖಲಿಸಿದ ದೂರು ರದ್ದುಪಡಿಸಿ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ, ಪೊಲೀಸ್ ವೆಬ್‌ಸೈಟ್ ಮತ್ತು ಟ್ವಿಟ್ಟರ್‌ನಂತಹ ಸಾಮಾಜಿಕ ಜಾಲ ತಾಣದಲ್ಲಿ ಪ್ರಕಟಿಸಿರುವ ಅರ್ಜಿದಾರರ ಫೋಟೊ ಹಾಗೂ ಇತರೆ ಮಾಹಿತಿಯನ್ನು ಕೂಡಲೇ ತೆಗೆದುಹಾಕಬೇಕು ಎಂದು ಪೊಲೀಸರಿಗೆ ತಾಕೀತು ಮಾಡಿದೆ. ಈ ಮಧ್ಯೆ ಪ್ರಕರಣದಲ್ಲಿ ಅರ್ಜಿದಾರರಿಗೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 370(ದೈಹಿಕ ಅಥವಾ ಲೈಂಗಿಕ ಶೋಷಣೆ ಆರೋಪ) ಅನ್ವಯಿಸುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಮೊದಲ ಪ್ರಕರಣ: ಬೆಂಗಳೂರಿನ ಎಚ್‌ಬಿಆರ್ ಲೇಔಟ್‌ನ ಕಲ್ಯಾಣನಗರದ ಗೆಲಾಕ್ಸಿ ಸ್ಪಾನಲ್ಲಿ ಕೆಲ ವ್ಯಕ್ತಿಗಳು ಅನೈತಿಕ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಬಾಣಸವಾಡಿ ಠಾಣೆ ಪೊಲೀಸರು 2017ರ ಎ.2ರಂದು ಸ್ಪಾ ಮೇಲೆ ದಾಳಿ ನಡೆಸಿ 12 ಮಂದಿಯನ್ನು ಬಂಧಿಸಿದ್ದರು. ದಾಳಿ ವೇಳೆ ಐವರು ಮಹಿಳೆಯರನ್ನು ರಕ್ಷಿಸಿದ್ದಾಗಿ ಪೊಲೀಸರು ಹೇಳಿಕೊಂಡಿದ್ದರು. ದಾಳಿ ವೇಳೆ ಹೆಬ್ಬಾಳದ ಕೆಂಪಾಪುರದ ಕಾಫಿ ಬೋರ್ಡ್ ಲೇಔಟ್ ನಿವಾಸಿಯೊಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.

ಎರಡನೆ ಪ್ರಕರಣ: ಮೈಸೂರಿನ ಲಕ್ಷ್ಮೀನಗರ ಬಳಿ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಹಾಗೂ ಕೆಲ ಅಮಾಯಕ ಯುವತಿಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳುತ್ತಿರುವ ಮಾಹಿತಿ ವಿಜಯನಗರ ಠಾಣೆ ಪೊಲೀಸರಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ 2015ರ ಸೆ.9ರಂದು ಆ ಮನೆ ಮೇಲೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದರು.

ಈ ಎರಡು ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಅನೈತಿಕ ವ್ಯವಹಾರ ನಿಷೇಧ ಕಾಯ್ದೆ-1956ರ ಸೆಕ್ಷನ್ 3,4,5,6,7 ಮತ್ತು ಐಪಿಸಿ ಸೆಕ್ಷನ್ 370ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಪೊಲೀಸರು ದಾಖಲಿಸಿದ ಎಫ್‌ಐಆರ್ ರದ್ದುಕೋರಿ ಎಲ್ಲ ಆರೋಪಿಗಳು ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.

ಗಿರಾಕಿಗಳು ವೇಶ್ಯಾವಾಟಿಕೆ ನಡೆಸುವವರಲ್ಲ: ಪ್ರಕರಣಗಳ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರು ವೇಶ್ಯಾವಾಟಿಕೆಯ ಗಿರಾಕಿಗಳಷ್ಟೇ ಆಗಿದ್ದಾರೆ. ಅರ್ಜಿದಾರರ(ಗಿರಾಕಿಗಳ) ವಿರುದ್ಧದ ಎಫ್‌ಐಆರ್‌ನಲ್ಲಿ ಯಾವ ಸೆಕ್ಷನ್‌ನ ಆರೋಪಗಳೂ ಇಲ್ಲ ಮತ್ತು ಗಿರಾಕಿಗಳಿಗೆ ಈ ಸೆಕ್ಷನ್‌ಗಳು ಅನ್ವಯಿಸುವುದಿಲ್ಲ ಎಂದು ಹೇಳಿ ಅರ್ಜಿದಾರರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿ ಆದೇಶಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X