Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭೂ ಸುಧಾರಣೆಗಳ ತಿದ್ದುಪಡಿ ವಿಧೇಯಕಕ್ಕೆ...

ಭೂ ಸುಧಾರಣೆಗಳ ತಿದ್ದುಪಡಿ ವಿಧೇಯಕಕ್ಕೆ ಸಿಗದ ಅಂಕಿತ: ಸರಕಾರದ ವಿರುದ್ಧ ಶಾಸಕ ಕೆ.ಶಿವಮೂರ್ತಿ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ6 May 2017 9:15 PM IST
share

ಬೆಂಗಳೂರು, ಮೇ 6: ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಕರ್ನಾಟಕ ಭೂ ಸುಧಾರಣೆಗಳ ತಿದ್ದುಪಡಿ ವಿಧೇಯಕವನ್ನು ಈವರೆಗೆ ರಾಜ್ಯಪಾಲರ ಅಂಕಿತ ಪಡೆಯಲು ಕಳುಹಿಸಿಕೊಡದ ಸರಕಾರದ ನಿಲುವಿಗೆ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಶಿವಮೂರ್ತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಸಂದರ್ಭದಲ್ಲಿ ‘ವಾಸಿಸುವವನೇ ನೆಲದ ಒಡೆಯ’ ಎಂಬ ಆಶಯದೊಂದಿಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕವನ್ನು ಈವರೆಗೆ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿ ಕೊಡದಿರುವುದು ಸರಿಯಲ್ಲ ಎಂದರು.

ಈ ವಿಧೇಯಕಕ್ಕೆ ನಮ್ಮ ಪಕ್ಷದ ಕೆಲವು ಶಾಸಕರು ವಿರೋಧಿಸಿದ್ದರು. ಆದರೂ, ಸರಕಾರ ದಿಟ್ಟ ನಿಲುವಿನೊಂದಿಗೆ ಸದನದ ಎದುರು ಮಂಡಿಸಿತು. ವಿಧಾನಮಂಡಲದ ಉಭಯ ಸದನಗಳಲ್ಲಿ ವಿಧೇಯಕ ಅಂಗೀಕಾರಗೊಂಡ 7 ದಿನಗಳಲ್ಲಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಬೇಕು. ಆದರೆ, 2 ತಿಂಗಳು, 10 ದಿನಗಳಾದರೂ ಈವರೆಗೆ ವಿಧೇಯಕವನ್ನು ರಾಜ್ಯಪಾಲರಿಗೆ ಕಳುಹಿಸಿಕೊಡದಿರಲು ಕಾರಣವೇನು ಎಂದು ಅವರು ಪ್ರಶ್ನಿಸಿದರು.

ವಿಧಾನಮಂಡಲದಲ್ಲಿ ಅಂಗೀಕಾರಗೊಂಡ ವಿಧೇಯಕವನ್ನು ರಾಜ್ಯಪಾಲರಿಗೆ ಕಳುಹಿಸುವುದನ್ನು ಬಿಟ್ಟು, ಕಾನೂನು ಇಲಾಖೆಯು ಅಡ್ವೊಕೇಟ್ ಜನರಲ್‌ಗೆ ಕಳುಹಿಸಿಕೊಟ್ಟಿದ್ದೇಕೆ. ಸದನ ದೊಡ್ಡದೋ, ಅಡ್ವೊಕೇಟ್ ಜನರಲ್ ದೊಡ್ಡವರೋ, ಈ ವಿಚಾರದ ಕುರಿತು ಈಗಾಗಲೆ ಮುಖ್ಯಮಂತ್ರಿ ಬಳಿ ಮಾತನಾಡಿದ್ದೇನೆ, ಕಾನೂನು ಸಚಿವರು ಬಾಯಿ ಬಿಡುತ್ತಿಲ್ಲ ಎಂದು ಶಿವಮೂರ್ತಿ ಬೇಸರ ವ್ಯಕ್ತಪಡಿಸಿದರು.

2013ರಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ನಾವು ಸತತವಾಗಿ ಹೋರಾಟ ಮಾಡಿಕೊಂಡ ಫಲವಾಗಿ ಈ ವಿಧೇಯಕ ಮಂಡನೆಯಾಗಿ ಅಂಗೀಕಾರ ಪಡೆದುಕೊಂಡಿದೆ. ರಾಜ್ಯ ಸರಕಾರವು ಆದಷ್ಟು ಶೀಘ್ರದಲ್ಲಿ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡದಿದ್ದರೆ, ಹೈಕಮಾಂಡ್‌ಗೆ ದೂರು ನೀಡಲು ಹಿಂಜರಿಯುವುದಿಲ್ಲ ಎಂದು ಶಿವಮೂರ್ತಿ ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X