Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾತಾಳ ಗಂಗೆ ಹೊರ ತರುವುದು ಅತ್ಯಂತ ಘೋರ:...

ಪಾತಾಳ ಗಂಗೆ ಹೊರ ತರುವುದು ಅತ್ಯಂತ ಘೋರ: ಯೋಜನೆಗೆ ಭೂ ವಿಜ್ಞಾನಿ, ಜಲತಜ್ಞರಿಂದ ವಿರೋಧ

ವಾರ್ತಾಭಾರತಿವಾರ್ತಾಭಾರತಿ6 May 2017 9:20 PM IST
share

ಬೆಂಗಳೂರು,ಮೇ 6: ಕುಡಿಯುವ ನೀರಿನ ಸಮಸ್ಯೆಯ ಮಾರ್ಗೋಪಾಯವಾಗಿ ಪಾತಾಳ ಗಂಗೆಯನ್ನು ಭೂ ಗರ್ಭದಿಂದ ಹೊರ ತರುವುದು ಅತ್ಯಂತ ಘೋರ ಎಂದು ಭೂ ವಿಜ್ಞಾನಿ ಟಿ.ಆರ್.ಅನಂತರಾಮ್ ಹೇಳಿದ್ದಾರೆ.

ಶನಿವಾರ ನಗರದ ಶಾಸಕರ ಭವನದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿದ್ದ ಪಾತಾಳ ಗಂಗೆ ಯೋಜನೆಯ ಕುರಿತ ದುಂಡು ಮೇಜಿನ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮೂರ್ನಾಲ್ಕು ಶತಮಾನಗಳ ಹಿಂದೆ ಸುಮಾರು ನಾಲ್ಕು ಸಾವಿರ ಮೀಟರ್ ಆಳದ ಭೂ ಗರ್ಭದಲ್ಲಿ ಶೇಖರಣೆಯಾಗಿರುವ ಪಾತಾಳ ನೀರನ್ನು ಹೊರ ತರುವುದು ಅತ್ಯಂತ ಘೋರ. ಇದರಿಂದ ಭಾರಿ ಹಾನಿ ಸಂಭವಿಸಲಿದೆ. ಸಿಲಿಕಾರ್ಡ್, ಕ್ಲೋರೆಡ್ ಅಂಶಗಳು ಹೆಚ್ಚಿರುವ ಈ ನೀರು ಬಳಕೆಗೂ ಯೋಗ್ಯವಲ್ಲ. ಈ ನೀರನ್ನು ಕುಡಿದ ಜೀವಸಂಕುಲ ಭವಿಷ್ಯದಲ್ಲಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.

ಭೂಕಂಪನ ತೀವ್ರತೆ ಹೆಚ್ಚಾಗಲಿದೆ
ಪಾತಾಳ ಗಂಗೆಯನ್ನು ಹೊರ ತೆಗೆದರೆ ಭೂಮಿಯ ಭದ್ರ ಬುನಾದಿಗೆ ಧಕ್ಕೆಯಾಗಲಿದೆ. 2.5 ಸಾವಿರ (2.5 ಸಾವಿರದಿಂದ 8 ಸಾವಿರ ಮೀಟರ್) ಮೀಟರ್ ಆಳದವರೆಗೂ ಭೂಮಿಯನ್ನು ಕೊರೆದರೆ ಭೂಮಿಯ ಒಳ ಪದರದಲ್ಲಿ ಪರಿಣಾಮಕಾರಿ ಬದಲಾವಣೆಗಳು ಸಂಭವಿಸಲಿವೆ. ಭೂ ಗರ್ಭದಿಂದ ನೀರನ್ನು ಹೊರ ತೆಗೆದದ್ದೇ ಆದಲ್ಲಿ ಭೂಕಂಪನದ ತೀವ್ರತೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಪಾತಾಳ ಯೋಜನೆಯಡಿ ಕೊರೆಯುವ ಒಂದು ಕೊಳವೆ ಬಾವಿಯಿಂದ ಪ್ರತಿ ಗಂಟೆಗೆ ಒಂದು ಲಕ್ಷ ಲೀ.ನೀರನ್ನು ಹೊರ ತೆಗೆಯಬಹುದು. ಇದರಿಂದ ಗ್ರಾಮೀಣ ಪ್ರದೇಶದ ಶೇ.80ರಷ್ಟು ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಬಹುದು ಎಂದು ಹೇಳುವ ಮೂಲಕ ಸರಕಾರ ಜನರನ್ನು ‘ಮೂರ್ಖ’ರನ್ನಾಗಿಸುತ್ತಿದೆ. ಕೋಲಾರದ ಚಿನ್ನದ ಗಣಿಯಲ್ಲಿ 2.5 ಸಾವಿರ ಮೀಟರ್‌ಗಿಂತ ಹೆಚ್ಚಿನ ಆಳಕ್ಕೆ ಭೂಮಿಯನ್ನು ಕೊರೆಯಲಾಗಿದೆ. ಇಲ್ಲಿ ಸಂಗ್ರಹವಾಗಿರುವ ನೀರು ಬಯಲು ಸೀಮೆಯ ಅವಳಿ ಜಿಲ್ಲೆಗಳ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಬಹುದು. ಆದರೆ ಈ ಯೋಜನೆಗೆ ಸರಕಾರ ಯಾಕೆ ಕೈ ಹಾಕುತ್ತಿಲ್ಲ ಎಂದು ಪ್ರಶ್ನಿಸಿದರು.

10 ಸಾವಿರ ಮೀಟರ್ ಆಳಕ್ಕೆ ಭೂಮಿಯನ್ನು ಕೊರೆದರೆ ನೀರು ಸಿಗುತ್ತದೆ ಎಂದು ನಿಖರವಾಗಿ ಹೇಳಲು ಆಗುವುದಿಲ್ಲ. ಪ್ರತಿ ಬಾವಿಗೆ 10ರಿಂದ 12 ಕೋಟಿ ವೆಚ್ಚ ತಗಲಲಿದೆ ಎಂದು ಸರಕಾರ ಹೇಳುವಷ್ಟು ಸರಳವಲ್ಲ. ನೀರಿನ ಮೂಲಗಳನ್ನು ಸಂರಕ್ಷಣೆ ಮಾಡುವುದರೊಂದಿಗೆ ಲಭ್ಯವಿರುವ ನೀರನ್ನು ಮಿತ ಬಳಕೆ ಮತ್ತು ಮಳೆ ನೀರನ್ನು ಸಮರ್ಪಕವಾಗಿ ಬಳಸಿಕೊಂಡರೆ ನೀರಿನ ಸಮಸ್ಯೆ ಬಹುಪಾಲು ನೀಗಲಿದೆ ಎಂದು ಅಭಿಪ್ರಾಯಪಟ್ಟರು.

ಜಲ ತಜ್ಞ ಎಲೆ ಲಿಂಗರಾಜು ಮಾತನಾಡಿ, ಪಾತಾಳ ಗಂಗೆ ಯೋಜನೆಯಡಿ ನಿಸರ್ಗದ ಸ್ವಾಭಾವಿಕ ವ್ಯವಸ್ಥೆಯನ್ನು ಕದಡಲು ಸರಕಾರ ಮುಂದಾಗಿದೆ. ಪಾತಾಳ ಯೋಜನೆ ಜೀವ ಸಂಕುಲಕ್ಕೆ ಮಾರಕ. ಇಂತಹ ದುಸ್ಸಾಹಸಕ್ಕೆ ಸರಕಾರ ಕೈ ಹಾಕುವುದು ಬಿಡಲಿ. ಇದರ ಬದಲಿಗೆ ಮಳೆ ನೀರು ಕೊಯ್ಲಿಗೆ ಹೆಚ್ಚಿನ ಆದ್ಯತೆ ನೀಡಲಿ ಎಂದು ತಿಳಿಸಿದರು.

ಭೂ ವಿಜ್ಞಾನಿ ಡಾ.ಎಚ್.ಚಂದ್ರಶೇಖರ್ ಮಾತನಾಡಿ, ಭೂ ಗರ್ಭದ ನೀರು ಅತ್ಯಂತ ವಿಷಕಾರಿ ಎಂಬುವುದು ಸರಕಾರದ ಅರಿವಿಗೆ ಬಾರದೆ ಇರುವುದು ಆತಂಕಕಾರಿ. ರಾಜ್ಯ ಬರದಿಂದ ತತ್ತರಿಸುತ್ತಿರುವಾಗ ಭೂ ಗರ್ಭದ ನೀರನ್ನು ಹೊರ ತೆಗಯಲು ಮುಂದಾಗಿರುವುದು ಮೂರ್ಖತನದ ಕೆಲಸ ಎಂದು ಛೇಡಿಸಿದರು.

ಸಭೆಯಲ್ಲಿ ಸಮಿತಿಯ ಜಂಟಿ ಕಾರ್ಯದರ್ಶಿ ಆರ್.ರಾಮಕೃಷ್ಣ, ಸಮುದಾಯ ಸಂಘಟನೆಯ ಕೆ.ಎಸ್.ವಿಮಲಾ, ಸುರೇಂದ್ರ, ಮಳೆ ನೀರು ಕೋಯ್ಲು ತಜ್ಞ ಆನಂದ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಸಮರ್ಥಿಸಿಕೊಳ್ಳುವಲ್ಲಿಯೂ ವಿಫಲ: ಸಭೆಯಲ್ಲಿ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಪ್ರಕಾಶ್ ಕಮ್ಮರಡಿ ಸರಕಾರದ ಪರ ವಕಾಲತ್ತು ವಹಿಸಿ ಯೋಜನೆಯನ್ನು ಸಮರ್ಥಿಸಿಕೊಳ್ಳಲು ಪಟ್ಟ ಪ್ರಯತ್ನ ವಿಫಲವಾಯಿತು. ಯೋಜನೆಯ ದುಷ್ಪರಿಣಾಮ ಕುರಿತು ವಿಜ್ಞಾನಿಗಳು ನೀಡಿದ ಕರಾರುವಾಕ್ಕಾದ ಮಾಹಿತಿಯಿಂದ ಕಮ್ಮರಡಿ ಸಭೆಯಲ್ಲಿ ವೌನ ವಹಿಸಬೇಕಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X