ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ: ಶಕುಂತಳಾ
ಶಂಕುಸ್ಥಾಪನೆ
_0.jpg)
ಉಪ್ಪಿನಂಗಡಿ, ಮೇ 6: ಆರ್‌ಡಿಎಫ್ (ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಧಿ) ಯೋಜನೆಯಡಿ ಪಶು ವೈದ್ಯಕೀಯ ಆಸ್ಪತ್ರೆಗೆ ನೂತನ ಕಟ್ಟಡ ನಿರ್ಮಾಣಕ್ಕಾಗಿ ಪುತ್ತೂರು ತಾಲೂಕಿನಲ್ಲಿ ಮೂರು ಕಡೆಗಳಿಗೆ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕಿ ಟಿ. ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ.
ಇಲ್ಲಿನ ಪಶು ವೈದ್ಯಕೀಯ ಆಸ್ಪತ್ರೆಗೆ ಮಂಜೂರಾದ ನೂತನ ಕಟ್ಟಡಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಪುತ್ತೂರಿಗೆ 26.83 ಲಕ್ಷ ರೂ., ಕೋಡಿಂಬಾಡಿಗೆ 18.78 ಲಕ್ಷ ರೂ. ಹಾಗೂ ಉಪ್ಪಿನಂಗಡಿಗೆ 27.80 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಉಪ್ಪಿನಂಗಡಿಯಲ್ಲಿ ಈಗಿರುವ ಪಶು ವೈದ್ಯಕೀಯ ಆಸ್ಪತ್ರೆಯು 1962ರಲ್ಲಿ ನಿರ್ಮಾಣವಾಗಿದ್ದು, ಇದೀಗ ಹೊಸ ಕಟ್ಟಡದ ಕಾಮಗಾರಿ ನಿರ್ಮಿತಿ ಕೇಂದ್ರದಡಿ ನಡೆಯಲಿದೆ. ಮುಂದಿನ ವರ್ಷಾರಂಭದ ಮೊದಲೇ ಕಟ್ಟಡ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಪ್ರಯೋಜನಕ್ಕೆ ಲಭಿಸುವ ವಿಶ್ವಾಸವಿದೆ ಎಂದರು.
ಕಾರ್ಯಕ್ರಮದಲ್ಲಿ ಪುತ್ತೂರು ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ, ಉಪಾಧ್ಯಕ್ಷೆ ರಾಜೇಶ್ವರಿ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸರ್ವೋತ್ತಮ ಗೌಡ, ಸದಸ್ಯೆ ಶಯನಾ ಜಯಾನಂದ್, ತಾಪಂ ಸದಸ್ಯೆ ಸುಜಾತ ಕೃಷ್ಣ, ಉಪ್ಪಿನಂಗಡಿ ಗ್ರಾಪಂ ಅಧ್ಯಕ್ಷ ಅಬ್ದುರ್ರಹ್ಮಾನ್ ಕೆ., ಸದಸ್ಯ ಇಬ್ರಾಹೀಂ ಕೆ., ಉಮೇಶ್ ಗೌಡ, ಪುಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಬಜತ್ತೂರು ಗ್ರಾಪಂ ಅಧ್ಯಕ್ಷ ಸಂತೋಷ್ ಕುಮಾರ್ ಪಂರ್ದಾಜೆ, ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಯು.ಟಿ. ತೌಸೀಫ್, ಉಪ್ಪಿನಂಗಡಿ ಶ್ರೀ ಸಹಸ್ರ ಲಿಂಗೇಶ್ವರ-ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘುನಾಥ ರೈ ಅಲಿಮಾರ್, ಸದಸ್ಯರಾದ ಕೃಷ್ಣ ಜೆ ರಾವ್, ಪ್ರಕಾಶ್ ರೈ ಬೆಳ್ಳಿಪ್ಪಾಡಿ, ಪ್ರಮುಖರಾದ ಶಾಂಭವಿ ರೈ ಪುಳಿತ್ತಡಿ, ಮಾಣಿಕ್ಯ ರಾಜ್ ಪಡಿವಾಳ್, ಪೌಲ್ ಡಿಸೋಜ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆಯ ಜಿಲ್ಲಾ ಉಪ ನಿರ್ದೇಶಕ ತಿಪ್ಪೇಸ್ವಾಮಿ, ತಾಪಂ ಕಾರ್ಯದರ್ಶಿ ಜಗದೀಶ್, ನಿರ್ಮಿತಿ ಕೇಂದ್ರ ಇಂಜಿನಿಯರ್ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.







