Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾರ್ವಜನಿಕ ಹಣ ಪೋಲಾಗುವುದೆಂದರೆ ಹೀಗೇನೇ!

ಸಾರ್ವಜನಿಕ ಹಣ ಪೋಲಾಗುವುದೆಂದರೆ ಹೀಗೇನೇ!

ವಾರ್ತಾಭಾರತಿವಾರ್ತಾಭಾರತಿ7 May 2017 5:10 PM IST
share
ಸಾರ್ವಜನಿಕ ಹಣ ಪೋಲಾಗುವುದೆಂದರೆ ಹೀಗೇನೇ!

ಮಂಗಳೂರು, ಮೇ 7: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಜೈವಿಕ ತ್ಯಾಜ್ಯ ಸಂಸ್ಕರಣಾ ಘಟಕವೆಂಬ ಹೆಗ್ಗಳಿಕೆಯೊಂದಿಗೆ ಮುಡಿಪುವಿನ ಕುರ್ನಾಡು ಗ್ರಾಮ ಪಂಚಾಯತ್‌ನಲ್ಲಿ ತಲೆ ಎತ್ತಿದ್ದ ಕಟ್ಟಡ ಇಂದು ನಿರ್ವಹಣೆ ಇಲ್ಲದೆ ನಾ ಪಾಳು ಬಿದ್ದ ಸ್ಥಿತಿಯಲ್ಲಿದೆ. ಅಷ್ಟೇ ಅಲ್ಲ, ಘಟಕದ ದುಸ್ಥಿತಿಯನ್ನು ಅದರ ಎದುರೇ ರಾಶಿ ಬಿದ್ದಿರುವ ಕಸದ ರಾಶಿ ಅಣಕಿಸುವಂತಿದೆ.

ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣವಾದ ಬಹು ನಿರೀಕ್ಷೆಯ ಘಟಕವೊಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಉದಾಸೀನ ಪ್ರವೃತ್ತಿಯಿಂದಾಗಿ ಕೆಲ ವರ್ಷಗಳಲ್ಲೇ ಪಾಳು ಬಿದ್ದಿರುವುದು ಸಾರ್ವಜನಿಕರಿಗೆ ಮಾಡಿರುವ ಅವಮಾನವೆಂದರೂ ತಪ್ಪಲ್ಲ. ಸಾರ್ವಜನಿಕರ ತೆರಿಗೆ ಹಣ ಅದು ಹೇಗೆಲ್ಲಾ ಪೋಲಾಗುತ್ತದೆ ಎಂಬುದಕ್ಕೆ ಈ ಕಟ್ಟಡ ನಿದರ್ಶನವೂ ಆಗಿದೆ.

ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸುವ ಈ ಜೈವಿಕ ತ್ಯಾಜ್ಯ ಸಂಸ್ಕರಣಾ ಘಟಕವನ್ನು 2010ರ ಅಕ್ಟೋಬರ್ 2ರಂದು ಉದ್ಘಾಟಿಸಲಾಗಿತ್ತು. 20 ಸೆಂಟ್ಸ್ ಜಾಗದಲ್ಲಿ 2.5 ಲಕ್ಷ ರೂ. ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣಗೊಂಡಿತ್ತು. 2 ಲಕ್ಷ ರೂ.ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅನುದಾನ ಹಾಗೂ 50,000 ರೂ.ಗಳನ್ನು ಸ್ಥಳೀಯ ಪಂಚಾಯತ್‌ನಿಂದಲೇ ಇದಕ್ಕಾಗಿ ವ್ಯಯಿಸಲಾಗಿತ್ತು. ಸ್ಥಳೀಯವಾಗಿ ಸಂಗ್ರಹವಾದ ತ್ಯಾಜ್ಯವನ್ನು ಜೈವಿಕ ಮತ್ತು ಇತರ ತ್ಯಾಜ್ಯವಾಗಿ ವಿಂಗಡಿಸಿ, ಜೈವಿಕ ತ್ಯಾಜ್ಯಕ್ಕೆ ಒಎಸ್1 ದ್ರಾವಣವನ್ನು ಸಿಂಪಡಿಸುವ ಮೂಲಕ ಅದನ್ನು ಗೊಬ್ಬರವಾಗಿ ಪರಿವರ್ತಿಸುವ ಕಾರ್ಯ ಈ ಘಟಕದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅದ್ಯಾವುದೇ ಕಾರ್ಯ ಸಮರ್ಪಕವಾಗಿ ನಡೆಯದ ಕಾರಣ ಇದೀಗ ಸಾರ್ವಜನಿಕರು ಘಟಕದ ಎದುರೇ ತ್ಯಾಜ್ಯ ತುಂಬಿದ ಪ್ಲಾಸ್ಟಿಕ್ ಕವರ್‌ಗಳನ್ನು ಸುರಿಯುತ್ತಿದ್ದಾರೆ.

ಇದು ದನ ಕರುಗಳು ಹಾಗೂ ನಾಯಿಗಳು ಈ ತ್ಯಾಜ್ಯಗಳನ್ನು ತಿನ್ನಲು ಬರುವುದರಿಂದ ತ್ಯಾಜ್ಯ ರಸ್ತೆಯಲ್ಲೆಲ್ಲಾ ಹರಡಿ ಗಬ್ಬೆದ್ದು ಈ ದಾರಿಯಲ್ಲಿ ಓಡಾಡುವಾಗ ಮೂಗು ಮುಚ್ಚಿಕೊಳ್ಳುವಂತಾಗಿದೆ. ಘಟಕದ ಉದ್ಘಾಟನೆಯ ವೇಳೆ ಪಂಚಾಯತ್‌ನ 250 ಅಂಗಡಿಗಳು ಮತ್ತು ಮನೆಗಳಿಂದ ತ್ಯಾಜ್ಯವನ್ನು ಸಂಗ್ರಹಿಸಿ, ಒಂದು ಟನ್ ತ್ಯಾಜ್ಯದಿಂದ 200 ಕಿಲೋ ಗೊಬ್ಬರ ಉತ್ಪಾದನೆಗೆ ನಿರ್ಧರಿಸಲಾಗಿತ್ತು. ಉದ್ಘಾಟನೆಗೊಂಡು ಕೆಲ ಸಮಯ ಮಾತ್ರ ಈ ಘಟಕ ಕಾರ್ಯಾಚರಣೆ ನಡೆಸಿತ್ತು. ಇದೀಗ ಕಟ್ಟಡ ಸಂಪೂರ್ಣ ಹಾಳಾಗಿದೆ. ಜಿಲ್ಲೆಯ ಪ್ರಥಮ ಜೈವಿಕ ತ್ಯಾಜ್ಯ ಸಂಸ್ಕರಣಾ ಘಟಕವಾಗಿ ಕುರ್ನಾಡುವಿನಲ್ಲಿ ಈ ಘಟಕವನ್ನು ಸ್ಥಾಪಿಸಲಾಗಿತ್ತು. ಬಹಳ ನಿರೀಕ್ಷೆಯೂ ಇತ್ತು. ಇದನ್ನು ಉಳಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಸ ವಿಂಗಡಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನೂ ನಡೆಸಲಾಗಿತ್ತು.

ಅದಾಗಿಯೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತೀಚೆಗೆ ಈ ಘಟಕದ ಬಗ್ಗೆ ಅವ್ಯವಸ್ಥೆ, ಎದುರಿನ ತ್ಯಾಜ್ಯ ರಾಶಿಯ ಕುರಿತಂತೆಯೂ ಜಿಲ್ಲಾ ಪಂಚಾಯತ್‌ನ ಗಮನ ಸೆಳೆಯಲಾಗಿತ್ತು. ಇದರ ನಿಮಿತ್ತ ಕೆಲ ದಿನ ಕಸದ ರಾಶಿಯನ್ನು ತೆರವುಗೊಳಿಸುವ ಕಾರ್ಯ ನಡೆದಿತ್ತು. ಇದೀಗ ಮತ್ತದೇ ಪರಿಸ್ಥಿತಿ ಇದೆ. ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ನಾಗರಿಕರೂ ಕೂಡಾ ಪರಿಸರ ಕಾಳಜಿಯನ್ನು ಪ್ರದರ್ಶಿಸಿದಾಗ ಇಂತಹ ಪರಿಸ್ಥಿತಿ ನಿರ್ಮಾಣವಾಗದು ಎನ್ನುತ್ತಾರೆ ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕರಾದ ಶೀನ ಶೆಟ್ಟಿ ಮತ್ತು ಕೃಷ್ಣ ಮೂಲ್ಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X