ಬೈಕ್ ಗೆ ಬಸ್ ಢಿಕ್ಕಿ: ಮೂವರು ಮೃತ್ಯು

ಚಾಮರಾಜನಗರ, ಮೇ 7: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಬಳಿ ನಡೆದಿದೆ.
ಹನೂರು ಸಮೀಪದ ಕೆಂಪಯ್ಯನಹಟ್ಟಿ ಗ್ರಾಮದ ಬಳಿ ಮಹದೇಶ್ವರ ಬೆಟ್ಟದಿಂದ ಕೆಎಸ್ಸಾರ್ಟಿಸಿ ಬಸ್ ಬರುತ್ತಿರುವಾಗ ಎದುರಿನಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕರಿಯಪ್ಪ(51), ಮಹದೇವ(40) ಹಾಗೂ ನಾಗೇಂದ್ರ(14) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಹನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story





