ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: 12 ವರ್ಷ ಕಠಿಣ ಸಜೆ

ಕಲಬುರಗಿ, ಮೇ 7: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಅಪರಾಧಿಗೆ ನ್ಯಾಯಾಲಯ 12 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.
ಚಿತ್ತಾಪುರದ ಬಾಹೇರಪೇಟ ನಿವಾಸಿ ಹಾಜಿ ಕರೀಂ ಇಸೂಫ್ ಅಲ್ಲೂರ ಚಿತ್ತಾಪುರದಿಂದ ಬಾಲಕಿಯನ್ನು ಅಪಹರಿಸಿ, ಹೈದರಾಬಾದ್‌ಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ಸೇಡಂ ತಾಲೂಕಿನ ಬಟಗೇರಾ ಗ್ರಾಮದ ತನ್ನ ಸಂಬಂಧಿಕರ ಮನೆಯಲ್ಲಿಟ್ಟು ಒಂದು ತಿಂಗಳಿಗೂ ಹೆಚ್ಚು ಕಾಲ ಅತ್ಯಾಚಾರ ಎಸಗಿದ್ದ ಎಂದು ಪ್ರಕರಣ ದಾಖಲಾಗಿತ್ತು.
ಆಗಿನ ಚಿತ್ತಾಪುರ ಇನ್ಸ್ ಪೆಕ್ಟರ್ ಶಂಕರಗೌಡ ವಿ.ಪಾಟೀಲ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಪ್ರೇಮಾವತಿ ಅವರು, ಅಪರಾಧಿಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ.
Next Story





