ಕೋಡಿ ಬ್ಯಾರೀಸ್: ವಿದ್ಯಾರ್ಥಿ ಸಂಘ ಉದ್ಘಾಟನೆ

ಕುಂದಾಪುರ, ಮೇ 8: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಸಂಘ ಉದ್ಘಾಟನೆ ಸಮಾರಂಭ ನಡೆಯಿತು.
ಕಾರ್ಯಕ್ರಮವನ್ನು ಕೋಟೇಶ್ವರ ಸರಕಾರಿ ಸಂಯುಕ್ತ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಪ್ರಭಾಕರ್ ವಿತ್ಯಾಂತ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಮಾಸ್ಟರ್ ಮಹ್‌ಮೂದ್ ವಹಿಸಿದ್ದರು.
ಬಿಎಡ್ ಕಾಲೇಜಿನ ಪ್ರಾಂಶುಪಾಲ ಸಿದ್ದಪ್ಪ ಕೆ.ಎಸ್. ಪ್ರಾಸ್ತಾವಿಕ ಮಾತುಗಳನ್ನಾಡಿದರು.ಬ್ಯಾರೀಸ್ ಡಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಫಿರ್ದೌಸ್ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿ ನಿಶಾಂತ್ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ಶ್ರೀ ಲಕ್ಷ್ಮೀ ವಂದಿಸಿದರು. ಪ್ರಶಿಕ್ಷಣಾರ್ಥಿ ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.
Next Story





