ವಿದ್ಯಾರ್ಥಿ ವೇತನ ಸಮಸ್ಯೆ ಪರಿಸಹರಿಸಲು ಆಗ್ರಹಿಸಿ ಸಿಎಫ್‌ಐ ಪ್ರತಿಭಟನಾ ಜಾಥಾ

ಮಂಗಳೂರು, ಮೇ 8: ರಾಷ್ಟ್ರೀಯ ವಿದ್ಯಾರ್ಥಿ ವೇತನ ಯೋಜನೆಯಡಿ 2016-17ನೆ ಸಾಲಿನ ವಿದ್ಯಾರ್ಥಿ ವೇತನ ವಿತರಣೆಯಲ್ಲಿ ವಿಳಂಬವಾಗಿರುವುದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳೂರಿನಲ್ಲಿಂದು ಪ್ರತಿಭಟನಾ ಜಾಥಾ ನಡೆಸಿದರು.
ಅಲ್ಪ ಸಂಖ್ಯಾತರ ಇಲಾಖೆಯ ಮಂಗಳೂರಿನಲ್ಲಿರುವ ಕಚೇರಿಗೆ ಜಾಥಾ ನಡೆಸಿದ ಪ್ರತಿಭಟನಕಾರರು ವಿದ್ಯಾರ್ಥಿ ವೇತನದ ಗೊಂದಲ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಬಗ್ಗೆ ಅಲ್ಪ ಸಂಖ್ಯಾತರ ಇಲಾಖೆಯ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
Next Story





