Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ದಿಡ್ಡಳ್ಳಿ ನಿರಾಶ್ರಿತರಿಗೆ ಪುನರ್ವಸತಿ...

​ದಿಡ್ಡಳ್ಳಿ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಬಿಜೆಪಿ ಶಾಸಕರ ವಿರೋಧ: ಸಚಿವ ಎಂ.ಆರ್.ಸೀತಾರಾಂ

ವಾರ್ತಾಭಾರತಿವಾರ್ತಾಭಾರತಿ8 May 2017 6:35 PM IST
share
​ದಿಡ್ಡಳ್ಳಿ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಬಿಜೆಪಿ ಶಾಸಕರ ವಿರೋಧ: ಸಚಿವ ಎಂ.ಆರ್.ಸೀತಾರಾಂ

ಬೆಂಗಳೂರು, ಮೇ 8: ಕೊಡಗು ಜಿಲ್ಲೆಯ ದಿಡ್ಡಳ್ಳಿ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಆದರೆ, ಆ ಕಾರ್ಯಕ್ಕೆ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಆರೋಪ ಮಾಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ದಿಡ್ಡಳ್ಳಿ ನಿರಾಶ್ರಿತರನ್ನು ಮಾಜಿ ಶಾಸಕ ಎ.ಕೆ.ಸುಬ್ಬಯ್ಯ ದಿಕ್ಕುತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ. ಹೀಗಾಗಿ ಸಮಸ್ಯೆ ಪರಿಹಾರಕ್ಕೆ ತೊಡಕು ಉಂಟಾಗಿದೆ ಎಂದು ದೂರಿದರು.

ಅರಣ್ಯ ಭೂಮಿಯಲ್ಲಿ ವಾಸಿಸುತ್ತಿದ್ದ ಕಾರಣಕ್ಕೆ ದಿಡ್ಡಳ್ಳಿ ಆದಿವಾಸಿಗಳನ್ನು ಅಲ್ಲಿಂದ ತೆರವುಗೊಳಿಸಿದ್ದು, ಇದೀಗ ಅವರಿಗೆ ಬಸವನಹಳ್ಳಿ, ಜಗಮಳ್ಳೂರು, ಸಿದ್ದಾಪುರಗಳಲ್ಲಿ ನಿವೇಶನಗಳನ್ನು ಗುರುತಿಸಿ ಹಂಚುವ ಪ್ರಕ್ರಿಯೆ ಆರಂಭಿಸಲಾಗಿದೆ. ಸ್ಥಳೀಯ ಶಾಸಕರು, ಎ.ಕೆ.ಸುಬ್ಬಯ್ಯ ಮತ್ತು ಕೆಲ ಹೊರಗಿನ ವ್ಯಕ್ತಿಗಳು ನಿರಾಶ್ರಿತರಿಗೆ ಭೂಮಿ ಆಸೆ ತೋರಿಸಿ ದಿಡ್ಡಳ್ಳಿ ನಿರಾಶ್ರಿತರನ್ನು ದಾರಿ ತಪ್ಪಿಸುತ್ತಿದ್ದಾರೆ. ನಿರಾಶ್ರಿತರ ಬೇಡಿಕೆಯಂತೆ ನಿವೇಶನ ಹಂಚಿಕೆ ಪ್ರಕ್ರಿಯೆ ಆರಂಭಿಸಿರುವ ವೇಳೆ ಭೂಮಿ ನೀಡಬೇಕೆಂಬ ಕೂಗು ಕೇಳಿಬಂದಿದೆ ಎಂದರು.

ಅಸಮಾಧಾನ: ಸ್ಥಳೀಯ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯ ದಿಡ್ಡಳ್ಳಿ ನಿರಾಶ್ರಿತರಿಗೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸಿಸಲು ಅವಕಾಶ ಕಲ್ಪಿಸುವುದು ಸರಿಯಲ್ಲ. ಇದರಿಂದ ಭವಿಷ್ಯದಲ್ಲಿ ಸಮಸ್ಯೆ ಸೃಷ್ಟಿಯಾದರೆ ಯಾರು ಹೊಣೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆಂದು ಸೀತಾರಾಂ ತಮ್ಮ ಅಳಲನ್ನು ತೋಡಿಕೊಂಡರು.

ಈಗಾಗಲೇ 750 ಮಂದಿ ನಿರಾಶ್ರಿತರಿಗೆ ನಿವೇಶನ ಸಿದ್ಧಪಡಿಸಲಾಗಿದೆ. ಲಾಟರಿ ಮೂಲಕ ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಅನಾವಶ್ಯಕವಾಗಿ ಈ ಸಮಸ್ಯೆಯಲ್ಲಿ ಮತ್ತಷ್ಟು ಗೊಂದಲ ಹುಟ್ಟಿಸುವ ಪ್ರಯತ್ನಗಳು ನಡೆಯುತ್ತಿವೆ. ದಿಡ್ಡಳ್ಳಿ ನಿರಾಶ್ರಿತರ ಪ್ರಕರಣವನ್ನು ವಿಶೇಷವೆಂದು ಪರಿಗಣಿಸಿ ಅವರಿಗೆ ಮನೆ ನಿರ್ಮಿಸಿಕೊಳ್ಳಲು ತಲಾ 4 ಲಕ್ಷ ರೂ.ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದ ಅವರು, ಒಂದು ವೇಳೆ ಸರಕಾರ ನೀಡಿರುವ ನಿವೇಶನಗಳಿಗೆ ತೆರಳಿ ಮನೆ ಕಟ್ಟಿಕೊಂಡು ವಾಸ ಮಾಡಲು ಮುಂದಾಗದಿದ್ದಲ್ಲಿ ಎಲ್ಲ ನಿವೇಶನಗಳನ್ನು ಜಿಲ್ಲೆಯಲ್ಲಿನ ನಿರ್ಗತಿಕರಿಗೆ ಹಂಚಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X