ನ್ಯಾ. ಕರ್ಣನ್ ಗೆ ಆರು ತಿಂಗಳ ಜೈಲು
ಹೊಸದಿಲ್ಲಿ, ಮೇ 9: ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ಅವರಿಗೆ ಸುಪ್ರೀಂ ಕೋರ್ಟ್ 6 ತಿಂಗಳ ಜೈಲು ಸಜೆ ವಿಧಿಸಿದ್ದು, ಅವನ್ನು ಕೂಡಲೇ ಬಂಧಿಸುವಂತೆ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹಾರ್ ನೇತೃತ್ವದ ಏಳು ನ್ಯಾಯಾಧೀಶರ ನ್ಯಾಯಪೀಠ ಮಂಗಳವಾರ ಈ ಆದೇಶ ನೀಡಿದ್ದು, ಕೋಲ್ಕತಾ ಹೈಕೋರ್ಟ್‌ನ ಜಡ್ಜ್ ನ್ಯಾ. ಸಿ.ಎಸ್.ಕರ್ಣನ್ ಅವರನ್ನು ಕೂಡಲೇ ಬಂಧಿಸುವಂತೆ ಪಶ್ಚಿಮ ಬಂಗಾಳದ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದೆ.
ತನ್ನ ಮಾನಸಿಕ ಆರೋಗ್ಯದ ಪರೀಕ್ಷೆಗಾಗಿ ಸರ್ವೋಚ್ಚ ನ್ಯಾಯಾಲಯವು ನಿಯೋಜಿಸಿದ್ದ ವೈದ್ಯರ ತಂಡವನ್ನು ಕಳೆದ ವಾರ ವಾಪಸ್ ಕಳುಹಿಸಿದ್ದ ನ್ಯಾ.ಸಿ.ಎಸ್.ಕರ್ಣನ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಜಿ.ಎಸ್.ಖೇಹರ್ ಮತ್ತು ಶ್ರೇಷ್ಠ ನ್ಯಾಯಾಲಯದ ಏಳು ನ್ಯಾಯಾಧೀಶರಿಗೆ ಐದು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿರುವುದಾಗಿ ಸೋಮವಾರ ಹೇಳಿಕೆ ನೀಡಿದ್ದರು.
ನ್ಯಾಯಾಧೀಶರ ವಿರುದ್ಧದ ಜಾತಿ ತಾರತಮ್ಯ,ಒಳಸಂಚು,ಕಿರುಕುಳ ಮತ್ತು ನ್ಯಾಯಾಂಗ ನಿಂದನೆ ವಿರುದ್ಧ ಕಾನೂನು ಕ್ರಮದ ದುರುಪಯೋಗ ಆರೋಪಗಳು ಸಾಬೀತಾಗಿವೆ ಎಂದು ಅವರು ತನ್ನ ‘ಆದೇಶ ’ದಲ್ಲಿ ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಕರ್ಣನ್ ವಿರುದ್ಧ ಸುಪ್ರೀಂ ಕೋರ್ಟ್ ಆದೇಶ ನೀಡಿದೆ..