Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಆಟೊ ಚಾಲಕನ ಕೊಲೆ ಪ್ರಕರಣ ;...

ಮಂಗಳೂರು : ಆಟೊ ಚಾಲಕನ ಕೊಲೆ ಪ್ರಕರಣ ; ಇಬ್ಬರಿಗೆ ಜೀವಾವಧಿ ಶಿಕ್ಷೆ , ಓರ್ವ ಖುಲಾಸೆ

ವಾರ್ತಾಭಾರತಿವಾರ್ತಾಭಾರತಿ9 May 2017 6:06 PM IST
share
ಮಂಗಳೂರು : ಆಟೊ ಚಾಲಕನ ಕೊಲೆ ಪ್ರಕರಣ ; ಇಬ್ಬರಿಗೆ ಜೀವಾವಧಿ ಶಿಕ್ಷೆ , ಓರ್ವ ಖುಲಾಸೆ

ಮಂಗಳೂರು, ಮೇ 9: ಆಟೊ ಚಾಲಕನೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ವಿಧಿಸಿ ಒಂದನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಪ್ರಕರಣದ ಮತ್ತೋರ್ವ ಆರೋಪಿಯನ್ನು ಸಾಕ್ಷಾಧಾರದ ಕೊರತೆಯಿಂದ ಖುಲಾಸೆಗೊಳಿಸಿದೆ.

ದೇರಳಕಟ್ಟೆ ಬಗಂಬಿಲದ ನಿವಾಸಿ ಉದಯ ಅಲಿಯಾಸ್ ಬಾಬು ಮತ್ತು ಪೆರ್ಮನ್ನೂರು ಪಂಡಿತ್ ಹೌಸ್ ನಿವಾಸಿ ಲ್ಯಾನ್ಸಿ ಡಿಸೋಜ ಯಾನೆ ಲ್ಯಾನ್ಸಿ ಎಂಬವರು ಜೀವಾವಧಿ ಶಿಕ್ಷೆಗೊಳಗಾದವರು. ಅಲ್ಲದೆ, ಇಬ್ಬರಿಗೂ ತಲಾ 20 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ, 6 ತಿಂಗಳ ಹೆಚ್ಚುವರಿ ಶಿಕ್ಷೆಯನ್ನು ಅನುಭವಿಸುವಂತೆ ನ್ಯಾಯಾಧೀಶ ಸಿ.ಎಂ.ಜೋಷಿ ಆದೇಶ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ

2014ರ ಆಗಸ್ಟ್ 15ರಂದು ತೊಕ್ಕೊಟ್ಟಿನ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ಸಮೀಪದ ಸಂಗೀತ ಕಾರ್ಯಕ್ರಮವೊಂದು ಏರ್ಪಟ್ಟಿತ್ತು. ರೆಸ್ಟೋರೆಂಟ್‌ನಲ್ಲಿ ಊಟ ಮಾಡಲೆಂದು ಕೋಟೆಕಾರು ಸರಸ್ವತಿಕುಮೇರಿನ ನಿವಾಸಿ ಯತೀಶ್ ಕುಮಾರ್ (29) ತನ್ನ ಸ್ನೇಹಿತರೊಂದಿಗೆ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಲ್ಯಾನ್ಸಿ ಎಂಬಾತನಿದ್ದ. ಕೈಲಾಸ್ ಬಾಬು ಎಂಬಾತ ಸಂಗೀತ ನುಡಿಯುತ್ತಿದ್ದಾಗ ಲ್ಯಾನ್ಸಿ ತಮಾಷೆ ಮಾಡಿದ್ದನೆಂದು ಆರೋಪಿಸಲಾಗಿತ್ತು. ಇದನ್ನು ಯತೀಶ್ ಪ್ರಶ್ನಿಸಿದ್ದೇ ಆತನ ಜೀವಕ್ಕೆ ಕುತ್ತು ತಂದಿತ್ತು.

 ಜನರೆದು ತನ್ನನ್ನು ಪ್ರಶ್ನಿಸಿ ಅವಮಾನಿಸಿದ್ದಾನೆಂದು ಕುಪಿತನಾದ ಲ್ಯಾನ್ಸಿ ತನ್ನ ಸ್ನೇಹಿತರಾದ ಉದಯ ಮತ್ತು ವಿನಯ ಎಂಬವರನ್ನು ಸ್ಥಳಕ್ಕೆ ಬರುವಂತೆ ಹೇಳಿದ್ದ. ಸ್ಥಳಕ್ಕೆ ಆಗಮಿಸಿದವರೇ ಈ ತಂಡ ಯತೀಶ್‌ನನ್ನು ತಡೆದಿದ್ದು, ಪರಸ್ಪರ ಗಲಾಟೆ ನಡೆದಿತ್ತು. ಆಕ್ರೋಶಗೊಂಡ ಉದಯ ಯತೀಶ್‌ನನ್ನು ಚೂರಿಯಿಂದ ಇರಿದರೆ, ಲ್ಯಾನಿ, ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಯತೀಶ್‌ನನ್ನು ಆಸ್ಪತ್ರೆಗೆ ತಕ್ಷಣ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ.

ಈ ಬಗ್ಗೆ ಅಂದಿ ಉಳ್ಳಾಲ ಸಿಪಿಐಗಳಾದ ಧರ್ಮೇಂದ್ರ ಮತ್ತು ಸವಿತ್ರ ತೇಜ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಸೋಮವಾರ ವಾದ ವಿವಾದವನ್ನು ಆಲಿಸಿದ್ದ ನ್ಯಾಯಾಲಯವು ಇಬ್ಬರು ಅಪರಾಧಿಗಳೆಂದು ಘೋಷಿಸಿ, ಶಿಕ್ಷೆಯ ಪ್ರಮಾಣವನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು. ಪ್ರಕರಣದಲ್ಲಿ ಸರಕಾರಿ ಅಭಿಯೋಜಕ ರಾಜು ಪೂಜಾರಿ ಬನ್ನಾಡಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X