Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಕಲಚೇತನರ ಮೀಸಲಾತಿ ಆಯ್ಕೆ ಸಮರ್ಪಕವಾಗಿ...

ವಿಕಲಚೇತನರ ಮೀಸಲಾತಿ ಆಯ್ಕೆ ಸಮರ್ಪಕವಾಗಿ ನಡೆದಿಲ್ಲ : ಸುಧಾಕರ ಶೆಟ್ಟಿ

ವಿಕಲಚೇತನರ ಅರಿವಿನ ಸಿಂಚನ ಮಾಹಿತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 May 2017 6:47 PM IST
share
ವಿಕಲಚೇತನರ ಮೀಸಲಾತಿ ಆಯ್ಕೆ ಸಮರ್ಪಕವಾಗಿ ನಡೆದಿಲ್ಲ : ಸುಧಾಕರ ಶೆಟ್ಟಿ

ಪುತ್ತೂರು,ಮೇ 9: ವಿಕಲಚೇತನರಿಗೆ ಕೆಲಸ ಮತ್ತು ಇನ್ನಿತರ ವ್ಯವಸ್ಥೆಗಳಿಗೆ ನೀಡಲಾಗುತ್ತಿರುವ ಮೀಸಲಾತಿ ಆಯ್ಕೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮೀಸಲಾತಿಗಳು ಎಲ್ಲರಿಗೂ ತಲುಪುವ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳು ನಡೆಯಬೇಕು ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ಹೇಳಿದರು.

ಅವರು ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮುಂಬಾಗದ ನಟರಾಜ ವೇದಿಕೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ವಿಕಲಚೇತನರ ಅರಿವಿನ ಸಿಂಚನ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಕಲಚೇತನರು ಇದೀಗ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಹೆಸರು ಕೀರ್ತಿಯನ್ನು ಪಡೆಯುತ್ತಿದ್ದಾರೆ.

ಅವರಿಗೆ ಧೈರ್ಯ ಮತ್ತು ಶಕ್ತಿ ತುಂಬುವ ಕೆಲಸಗಳು ಆಗಬೇಕು. ಹಲವಾರು ಎಂಡೋಪೀಡಿತ ವಿಕಲಚೇತನರಿಗೆ ಇನ್ನೂ ಸರಿಯಾಗಿ ಮಾಶಾಸನ ದೊರಕದಿರುವುದು ವಿಷಾಧನೀಯ ಎಂದ ಅವರು ಈ ಬಗ್ಗೆ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಸಾಕಷ್ಟು ಮನವರಿಕೆ ಮಾಡುತ್ತಿದ್ದರೂ ಪೂರಕ ಸ್ಪಂಧನೆ ಸಿಗುತ್ತಿಲ್ಲ ಎಂದರು.

ಮಾನಸಿಕ ತಜ್ಞ ಡಾ. ಜಯಂತ್ ಕುಮಾರ್ ಮಾತನಾಡಿ ಮಾನಸಿಕ ಕಾಯಿಲೆಗಳ ಬಗ್ಗೆ ಹಲವಾರು ಮಂದಿಗಳಲ್ಲಿ ತಪ್ಪು ಕಲ್ಪನೆಗಳಿದ್ದು, ಶೇ. 30 ಮಂದಿ ಬದುಕಿನಲ್ಲಿ ಒಂದು ಬಾರಿಯಾದರೂ ಮಾನಸಿಕ ಕಾಯಿಲೆಗಳು ಬರುತ್ತಿದೆ. ಇದಕ್ಕೆ ಚಿಕಿತ್ಸೆಗಳಿಂದ ಪರಿಹಾರವಿದೆ. ಕೆಲವು ರೋಗಗಳು ಚಿಕಿತ್ಸೆಗೆ ಸ್ಪಂಧಿಸುವುದಿಲ್ಲ. ವಿವಾಹ ಮಾನಸಿಕ ರೋಗಕ್ಕೆ ಪರಿಹಾರವಲ್ಲ. ಮೊದಲು ರೋಗವನ್ನು ಪರಿಹರಿಸಿ ಬಳಿಕ ವಿವಾಹ ಮಾಡಿದರೆ ಕುಟುಂಬದಲ್ಲಿ ನೆಮ್ಮದಿ ಕಾಣಲು ಸಾಧ್ಯ. ಇದೊಂದು ಶಾಪದಿಂದ ಬರುವ ಕಾಯಿಲೆಯಲ್ಲ. ಇದರಿಂದ ರೋಗಿಗಳ ಪ್ರತಿಭೆಗೆ ಕುಂದಾಗುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ವಿಕಲಚೇತನರ ವಿಶೇಷ ಶಿಕ್ಷಕ ಶಿವಪ್ಪ ರಾಥೋಡ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ಪುತ್ತೂರು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪ್ರದೀಪ್ ಕುಮಾರ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗಡೆ, ತಾ.ಪಂ. ವಿಸ್ತರಣಾಧಿಕಾರಿ ಶಿವಪ್ರಕಾಶ್ ಅಡ್ಪಂಗಾಯ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ನೋಡೆಲ್ ಅಧಿಕಾರಿ ಪಿ.ಎಸ್. ಸುಬ್ರಮಣಿ, ಪುನರ್ವಸತಿ ಕಾರ್ಯಕರ್ತರ ಜಿಲ್ಲಾ ಅಧ್ಯಕ್ಷ ನವೀನ್ ಕುಮಾರ್, ಲಯನೆಸ್ ಕ್ಲಬ್ ಅಧ್ಯಕ್ಷೆ ಅನ್ನಪೂರ್ಣ, ತಾಲೂಕು ವಿಕಲಚೇತನರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ್ ಎರ್ಕ ಮತ್ತಿತರರು ಉಪಸ್ಥಿತರಿದ್ದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ವಿಕಲಚೇತನರ ವಿಶೇಷ ಶಿಕ್ಷಕ ಶಿವಪ್ಪ ರಾಥೋಡ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಅಸಹಾಯಕರ ಸೇವಾ ಟ್ರಸ್ಟ್ ಅಧ್ಯಕ್ಷೆ ನಯನಾ ರೈ ಸ್ವಾಗತಿಸಿದರು. ಪುನರ್ವಸತಿ ಕಾರ್ಯಕರ್ತರಾದ ಮೋನಪ್ಪ ವಂದಿಸಿದರು. ಸೇಸಪ್ಪ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X