ಬಂಟ್ವಾಳ : ಕೊಲೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಬಂಟ್ವಾಳ, ಮೇ 9: ಮಾನಸಿಕವಾಗಿ ಅಸ್ವಸ್ಥಗೊಂಡು ಮನೆ ಬಿಟ್ಟಿದ್ದ ವ್ಯಕ್ತಿಯೊಬ್ಬರ ಮೃತದೇಹ ಕೊಲೆತ ಸ್ಥಿತಿಯಲ್ಲಿ ಬೆಂಜನಪದವಿನ ನಿರ್ಜನ ಪ್ರದೇಶವೊಂದರಲ್ಲಿ ಮಂಗಳವಾರ ಪತ್ತೆಯಾಗಿದೆ.
ಅಮ್ಮುಂಜೆ ಗ್ರಾಮದ ಕುಟ್ಟಿ ಪೂಜಾರಿ(51) ಮೃತ ವ್ಯಕ್ತಿ. ಪತ್ನಿ, ಇಬ್ಬರು ಮಕ್ಕಳನ್ನು ಹೊಂದಿರುವ ಅವರು ಕೆಲವು ಸಮಯದಿಂದ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದರು. ಮೂರು ತಿಂಗಳಿನಿಂದ ಪತ್ನಿ ಮಕ್ಕಳನ್ನು ಬಿಟ್ಟು ಹೋದವರು ಮನೆಗೆ ಬಾರದೆ ಬೆಂಜನ ಪದವಿನಲ್ಲಿ ಅಲೆದಾಡುತ್ತಿದ್ದು ವಿಪರೀತವಾಗಿ ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸುಮಾರು 5 ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಶಂಕಿಸಿರುವ ಪೊಲೀಸರು ತನಿಖೆಯ ಬಳಿಕ ಸಾವಿಗೆ ಕಾರಣ ತಿಳಿದು ಬರಬೇಕಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.





