ಜೂಜಾಟ: ಮೂವರ ಬಂಧನ
ಚಿಕ್ಕಮಗಳೂರು, ಮೇ 9: ಅಕ್ರಮ ಜೂಜಾಟದಲ್ಲಿ ತೊಡಗಿದ್ದ ಆರೋಪದಡಿ ಮೂವರು ಆರೋಪಿಗಳನ್ನು ಅಜ್ಜಂಪುರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳನ್ನು ಸಿದ್ದರಾಜು, ಮಹೇಶ್, ಧರ್ಮೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಪರ್ವತರಾಯನಕೆರೆ ಹಿಂಭಾಗದಲ್ಲಿ ಅಕ್ರಮ ಜೂಜಾಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1,040 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
Next Story





