ಮೇ13: ವಿವೇಕಾನಂದ ಕಾಲೇಜಿನಲ್ಲಿ ‘ಜ್ಞಾನ ಸಂಗಮ’ ರಾಷ್ಟ್ರೀಯ ಕಾರ್ಯಾಗಾರ
ಪುತ್ತೂರು, ಮೇ 10: ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅವರ ಪ್ರಾಜೆಕ್ಟ್‌ಗೆ ಸಂಬಂಧಿಸಿದಂತೆ ಪ್ರಬಂಧಗಳನ್ನು ಮಂಡಿಸುವುದರ ಮೂಲಕ ತಮ್ಮಲ್ಲಿರುವ ಹೊಸ ಹೊಸ ಆವಿಷ್ಕಾರಗಳನ್ನು ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ13ರಂದು ‘ಜ್ಞಾನ ಸಂಗಮ -2017’ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ಡಾ. ಎಮ್.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.
ಪುತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ಮತ್ತು ವಿವೇಕಾನಂದ ಸಂಶೋಧನಾ ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯುವುದು. ರಾಷ್ಟ್ರಾದ್ಯಂತ ವಿವಿಧ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಎಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಉದ್ಯಮಾಡಳಿತ ವಿಭಾಗದ ಸುಮಾರು 500 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡು ತಮ್ಮ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಅಲ್ಲದೆ ಪ್ರಾಜೆಕ್ಟ್‌ಗಳಿಗೆ ಸಂಬಂಧಪಟ್ಟ ಪೋಸ್ಟರ್‌ಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇಲ್ಲಿ ಮಂಡಿಸಲ್ಪಡುವ ಎಲ್ಲಾ ಪ್ರೌಢ ಪ್ರಬಂಧಗಳನ್ನು ಮುದ್ರಿಸಿ ಸಂಚಿಕೆಯ ರೂಪದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸಲಾಗುವುದು ಎಂದರು.
ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಎನ್‌ಐಟಿಕೆ ಸುರತ್ಕಲ್‌ನ ಯೋಜನೆ ಮತ್ತು ವಿನ್ಯಾಸ ವಿಭಾಗದ ಪೂರ್ವ ಮುಖ್ಯಾಧಿಕಾರಿ ಡಾ.ಎಸ್.ಜಿ.ಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಅಧ್ಯಕ್ಷತೆ ವಹಿಸುವರು. ಸಂಜೆ 4.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಳಚ್ಚಿಲ್‌ನ ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಪ್ರೊ.ರವಿ ನಾರಾಯಣ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಕಲ್ಲಾಜೆ ಅಧ್ಯಕ್ಷತೆ ವಹಿಸುವರು. ಕಾಲೇಜಿನ ಸಂಚಾಲಕ ರಾಧಾಕೃಷ್ಣ ಭಕ್ತ ಉಪಸ್ಥಿತಿರಿರುವರು ಎಂದರು.
ಸುದ್ದಿಗೋಷ್ಠಿಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ಕಾಲೇಜಿನ ಸಂಚಾಲಕ ರಾಧಾಕೃಷ್ಣ ಭಕ್ತ, ಕಾರ್ಯಕ್ರಮ ಸಂಯೋಜಕ ಪ್ರೊ. ಹರೀಶ್.ಎಸ್.ಆರ್ ಮತ್ತು ಮಾಧ್ಯಮ ವಿಭಾಗದ ಸಂಚಾಲಕ ಹರಿಪ್ರಸಾದ್ ದೈಲ ಉಪಸ್ಥಿತರಿದ್ದರು.







