Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳ್ಳಂಬೆಳಗ್ಗೆ 4 ಅಧಿಕಾರಿಗಳ ಮನೆ ಮೇಲೆ...

ಬೆಳ್ಳಂಬೆಳಗ್ಗೆ 4 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ10 May 2017 8:19 PM IST
share
ಬೆಳ್ಳಂಬೆಳಗ್ಗೆ 4 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು, ಮೇ 10: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪ ಕೇಳಿಬಂದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆ ಏಕಕಾಲದಲ್ಲಿ ನಾಲ್ಕು ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದು, ಅಧಿಕಾರಿಗಳ ಬಳಿ ಕೋಟ್ಯಂತರ ಮೌಲ್ಯದ ಆಸ್ತಿ ಹೊಂದಿರುವುದು ಗೊತ್ತಾಗಿದೆ.

 ಬುಧವಾರ ಮುಂಜಾನೆ ನಾಗರಬಾವಿಯಲ್ಲಿರುವ ಬಿಬಿಎಂಪಿ ಪೂರ್ವವಲಯದ ಜಂಟಿ ಆಯುಕ್ತ ಡಾ.ಯತೀಶ್ ಕುಮಾರ್, ರಾಮನಗರ ತಹಶೀಲ್ದಾರ್ ಎನ್.ರಘುಮೂರ್ತಿ, ಕೆಪಿಟಿಸಿಎಲ್ ನಿರ್ದೇಶಕ ಎಚ್.ನಾಗೇಶ್ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ರಾಮಕೃಷ್ಣಾರೆಡ್ಡಿ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆಸ್ತಿಪತ್ರಗಳನ್ನು ಪರಿಶೀಲಿಸಿದರು.

ಯತೀಶ್ ಆಸ್ತಿ ವಿವರ: ಪಾಲಿಕೆಯ ಪೂರ್ವವಲಯದ ಜಂಟಿ ಆಯುಕ್ತ ಡಾ.ಯತೀಶ್ ಕುಮಾರ್ ನಾಗರಬಾವಿಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದಾಗ, ನಗರದ ಬಿಟಿಎಂ ಲೇಔಟ್‌ನಲ್ಲಿ 1.5 ಕೋಟಿ ರೂ.ಮೌಲ್ಯದ ನಿವೇಶನ, ನಾಗರಬಾವಿಯಲ್ಲಿ 1.25 ಕೋಟಿ ರೂ.ಮನೆ, ಮೈಸೂರಿನಲ್ಲಿ ಎರಡು ನಿವೇಶನ, 4 ಲಕ್ಷ ರೂ.ನಗದು, 25 ಲಕ್ಷ ರೂ.ಮೌಲ್ಯದ ಚಿನ್ನಾಭರಣ, ಎರಡು ಕಾರುಗಳಿವೆ ಎನ್ನುವ ದಾಖಲೆ ಪತ್ರಗಳು ಪತ್ತೆಯಾಗಿವೆ ಎಂದು ಎಸಿಬಿ ಅಧಿಕೃತ ಮೂಲಗಳು ತಿಳಿಸಿವೆ.

ಜೈಲಿನಲ್ಲಿದ್ದರೂ ದಾಳಿ: ರಾಮನಗರ ತಹಶೀಲ್ದಾರ್ ಎನ್.ರಘುಮೂರ್ತಿ ಅವರು 2011ರಲ್ಲಿ ಮೈಸೂರಿನ ಮಾದಹಳ್ಳಿಯಲ್ಲಿ ಶಿರಸ್ತೇದಾರರಾಗಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಡಲು 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಸೆಷನ್ಸ್ ನ್ಯಾಯಾಲಯ ಅವರಿಗೆ ನಾಲ್ಕು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿತ್ತು. ನಾಲ್ಕು ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಇವರ ವಿರುದ್ಧ ಸಾರ್ವಜನಿಕರಿಂದ ಬಂದಿರುವ 20ಕ್ಕೂ ಅಧಿಕ ದೂರುಗಳನ್ನು ಆಧರಿಸಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಟಿಸಿಎಲ್ ನಿರ್ದೇಶಕ: ನಗರದ ಕಾವೇರಿ ಭವನದ ಕೆಪಿಟಿಸಿಎಲ್ ಕಚೇರಿಯಲ್ಲಿ ನಿರ್ದೇಶಕರಾಗಿರುವ ಎಚ್.ನಾಗೇಶ್ ಅವರಿಗೆ ಸೇರಿದ ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ನಿವಾಸಗಳ ಮೇಲೂ ಮುಂಜಾನೆ ಎಸಿಬಿ ದಾಳಿ ನಡೆಸಿತು. ಅವರ ಪುತ್ರ ಹಾಗೂ ಪತ್ನಿ ಹೆಸರಿನಲ್ಲಿದ್ದ ಅಕ್ರಮ ಆಸ್ತಿ ದಾಖಲೆಗಳು ಹಾಗೂ ಚಿನ್ನಾಭರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ.

 ರಾಮಕೃಷ್ಣಾರೆಡ್ಡಿ: ತಾಂತ್ರಿಕ ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ರಾಮಕೃಷ್ಣಾರೆಡ್ಡಿ ಅವರು ಬ್ಯಾಟರಾಯನಪುರದಲ್ಲಿ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ವಿಚಾರ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. ಇನ್ನು ಬ್ಯಾಂಕ್ ಖಾತೆಯಲ್ಲಿ 20 ಲಕ್ಷ ರೂ. ಠೇವಣಿ, ದುಬಾರಿ ಕಾರು ಹೊಂದಿರುವುದು ದಾಳಿಯಲ್ಲಿ ಬೆಳಕಿಗೆ ಬಂದಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಸಂಬಂಧ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡ ಎಸಿಬಿ ಅಧಿಕಾರಿಗಳು, ನಾಲ್ವರು ಅಧಿಕಾರಿಗಳಿಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ನಕಲಿ ಡಿಸಿ ಕಾರ್ಡ್ ಗಲಾಟೆ

 ನಗರದ ಕೆಂಪಾಪುರದ ವಿನಾಯಕ ಲೇಔಟ್‌ನ ತೇಜೋ ನಿಲಯದ ಮೇಲೆ ಎಸಿಬಿ ದಾಳಿ ನಡೆಸಿದಾಗ ತಾಂತ್ರಿಕ ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ರಾಮಕೃಷ್ಣಾರೆಡ್ಡಿ ಪುತ್ರ ತೇಜಸ್ ರೆಡ್ಡಿ, ನಾನು ಜಿಲ್ಲಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳ ಮೇಲೆ ಗಲಾಟೆ ಮಾಡಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಡಿಸಿ ಹೆಸರಿನ ನಕಲಿ ಗುರುತಿನ ಚೀಟಿ ಎಸಿಬಿ ಅಧಿಕಾರಿಗಳಿಗೆ ತೋರಿಸಿ ಮಾತಿನ ಚಕಮಕಿ ನಡೆಸಲು ಮುಂದಾಗಿದ್ದ ವೇಳೆ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಸಂಬಂಧ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡ ಎಸಿಬಿ ಅಧಿಕಾರಿಗಳು, ನಾಲ್ವರು ಅಧಿಕಾರಿಗಳಿಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X