ಉಡುಪಿ: ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಉಡುಪಿ, ಮೇ 10: ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉದ್ಘಾಟಿಸಿದರು.
ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಉಪಸ್ಥಿತರಿದ್ದರು. ಹೇಮರೆಡ್ಡಿ ಮಲ್ಲಮ್ಮ ಕುರಿತು ಸಾಹಿತಿ, ಲೇಖಕ ಮೇಟಿ ಮುದಿಯಪ್ಪ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಂಗಪ್ಪಸ್ವಾಗತಿಸಿ, ವಂದಿಸಿದರು.
Next Story





