Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಟಿಕರ್ ಅಂಟಿಸಿ ಹಣ ವಸೂಲಿಗಿಳಿದ...

ಸ್ಟಿಕರ್ ಅಂಟಿಸಿ ಹಣ ವಸೂಲಿಗಿಳಿದ ಪೊಲೀಸರು: ಆರೋಪ

ವಾರ್ತಾಭಾರತಿವಾರ್ತಾಭಾರತಿ10 May 2017 10:48 PM IST
share

ಬೆಂಗಳೂರು, ಮೇ 10: ನಗರದ ಪ್ರಮುಖ ಬೀದಿಯೊಂದರ ಚಿಲ್ಲರೆ ಅಂಗಡಿಗಳ ಬಾಗಿಲುಗಳಿಗೆ ಮುಗಿದು ಹೋಗಿರುವ ಕಾರ್ಯಕ್ರಮದ ಸ್ಟಿಕರ್(ಚೀಟಿ)ಗಳನ್ನು ಅಂಟಿಸಿ ಬರೋಬ್ಬರಿ 25 ಸಾವಿರಕ್ಕೂ ಹೆಚ್ಚು ಹಣ ಪೊಲೀಸರು ವಸೂಲಿ ಮಾಡಿರುವ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.

ಬೆಂಗಳೂರಿನ ಹೃದಯ ಭಾಗವಾಗಿರುವ ಕಾರ್ಪೋರೇಷನ್ ವೃತ್ತದ ಕಬ್ಬನ್‌ಪೇಟೆಯ ಹಮೀದ್ ಶಾ ಆವರಣದ ಮುಖ್ಯರಸ್ತೆಯಲ್ಲಿರುವ ನೂರಕ್ಕೂ ಹೆಚ್ಚು ಅಂಗಡಿಗಳಿಗೆ ಮಂಗಳವಾರ ಮತ್ತು ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಬೈಕ್‌ನಲ್ಲಿ ಬಂದ ಬೀಟ್ ಪೊಲೀಸರಿಬ್ಬರು, ಪ್ರತಿ ಚಿಲ್ಲರೆ ಅಂಗಡಿಗೆ 12ರಿಂದ 20 ಸ್ಟಿಕರ್ ಗಳನ್ನು ಅಂಟಿಸಿ ಒಂದಕ್ಕೆ 30 ರೂಪಾಯಿಗಳಂತೆ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ.

ಯಾವ ಸ್ಟಿಕರ್: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೂ ಪೊಲೀಸ್ ಧ್ವಜ ದಿನಾಚರಣೆ ಪ್ರಯುಕ್ತ ಎಪ್ರಿಲ್ 2, 2017ರ ಸ್ಟಿಕರ್ ಅನ್ನು ಬಿಡುಗಡೆಗೊಳಿಸಿ ಇದಕ್ಕೆ 20 ರೂಪಾಯಿ ನಿಗದಿ ಮಾಡಲಾಗಿತ್ತು. ಆದರೆ, ಇದೀಗ ಉಳಿದಿರುವ ನೂರಾರು  ಸ್ಟಿಕರ್ ಗಳನ್ನು ರಾತ್ರಿ ವೇಳೆ ಕಾರ್ಯಾಚರಣೆ ನಡೆಸುವ ಪೊಲೀಸರು, ಚಿಲ್ಲರೆ ಅಂಗಡಿ ಬಾಗಿಲಿಗೆ ಹಾಕಿ ಹಣ ಪಡೆಯುತ್ತಿದ್ದಾರೆ ಎಂದು ಚಿಲ್ಲರೆ ಅಂಗಡಿ ಮಾಲಕರೊಬ್ಬರು ಆರೋಪಿಸಿದ್ದಾರೆ.

ಬೀಡಾ ಅಂಗಡಿಯನ್ನೂ ಬಿಟ್ಟಿಲ್ಲ: ಮುಖ್ಯರಸ್ತೆಯಲ್ಲಿರುವ ಪಾನ್‌ಬೀಡಾ ಅಂಗಡಿಗೆ ಪ್ರತಿದಿನ 500 ರೂ.ಯಿಂದ 800 ರೂ. ವರೆಗೆ ವ್ಯಾಪಾರ ನಡೆಯುತ್ತದೆ. ಆದರೆ, ರಾತ್ರಿ ಬಂದ ಬೀಟ್ ಪೊಲೀಸರು 15 ಚೀಟಿಗಳನ್ನು ಅಂಟಿಸಿ ಒಂದಕ್ಕೆ 20 ರಂತೆ 300 ರೂ. ಹಣ ವಸೂಲಿ ಮಾಡಿ ಹೋದರು ಎಂದು ದೂರಲಾಗಿದೆ.

ಬೆದರಿಕೆ? ‘ಚೀಟಿ ಬೇಡ, ಇದರ ದಿನಾಂಕ ಮುಗಿದಿದೆ ಎಂದು ಚಿಲ್ಲರೆ ಅಂಗಡಿಯ ಮಾಲಕರಿಬ್ಬರು ವಿರೋಧಿಸಿದಕ್ಕೆ, ಪೊಲೀಸರಿಬ್ಬರು ನಿಮಗೆ ರಾತ್ರಿ 10 ಗಂಟೆ ನಂತರ ಅಂಗಡಿ ತೆರೆಯಲು ಬಿಡುವುದಿಲ್ಲ. ನಿಮ್ಮ ಮೇಲೆ ಮೊಕದ್ದಮೆ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ ಕಾರಣ, ನಾವು ಚೀಟಿಗಳನ್ನು ತೆಗೆದುಕೊಂಡೆವು ಎಂದು ಅಂಗಡಿ ಮಾಲಕರೊಬ್ಬರು ಬೇಸರ ವ್ಯಕ್ತಪಡಿಸಿರುವುದು ತಿಳಿದುಬಂದಿದೆ.

ಕಬ್ಬನ್ ಪೇಟೆಯ ಮುಖ್ಯ ರಸ್ತೆಯಲ್ಲಿರುವ ಅಂಗಡಿ ಮಾಲಕರು ಹೆಚ್ಚಾಗಿ ಕೇರಳ ಸೇರಿ ಇನ್ನಿತರೆ ರಾಜ್ಯದ ನಿವಾಸಿಗಳಾಗಿದ್ದು, ಈ ಕಾರಣದಿಂದಾಗಿಯೇ ಪೊಲೀಸರು ಕನ್ನಡದಲ್ಲಿರುವ ಚೀಟಿಗಳನ್ನು ಅಂಟಿಸಿ ಹಣ ವಸೂಲಿ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿಯೊರ್ವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X