Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಕಲ ಚೇತನರನ್ನು ಮುಖ್ಯವಾಹಿನಿಗೆ...

ವಿಕಲ ಚೇತನರನ್ನು ಮುಖ್ಯವಾಹಿನಿಗೆ ತರುವಲ್ಲಿ ಪ್ರಯತ್ನ : ಪಟೇಲ್ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಸ್ತಿತ್ವಕ್ಕೆ

ಮಮ್ತಾಜ್ ಮುಕ್ತಾರ್ ಅಲಿಮಮ್ತಾಜ್ ಮುಕ್ತಾರ್ ಅಲಿ11 May 2017 4:09 PM IST
share

ಸುಳ್ಯ, ಮೇ 11: ಸುಳ್ಯ ತಾಲೂಕಿನ ಆರಂತೋಡುನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಪಟೇಲ್ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ) ಉದ್ಘಾಟನಾ ಸಮಾರಂಭವು ಟಸ್ಟ್ ಕಚೇರಿಯಲ್ಲಿ ಇತ್ತೀಚೆಗೆ ನೆರವೇರಿತು.

ಗ್ರಾಮೀಣ ಪರಿಸರದಲ್ಲಿ ಚಾರಿಟೇಬಲ್‌ ಟ್ರಸ್ಟ್‌ ಸ್ಥಾಪಿಸಿ, ಸಮಾಜ ಸೇವೆಯ ಹಲವು ಗುರಿಯನ್ನಿಟ್ಟು ಕಾರ್ಯಾಚರಿಸಲಿವೆ. ಅದರಲ್ಲಿ ಮೊದಲಿಗೆ ವಿಕಲ ಚೇತನರ ಪಾಲನೆ ಹಾಗೂ ಅವರಿಗೆ ಸ್ವವಲಂಬಿ ಜೀವನವನ್ನು ಒದಗಿಸುವುದರೊಂದಿಗೆ ಟ್ರಸ್ಟ್ ತನ್ನ ಸಮಾಜ ಸೇವೆಯನ್ನು ಆರಂಭಿಸಲಿದೆ ಎಂದು ಪಟೇಲ್ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಚಯರ್ಮ್ಯಾನ್ ಬದ್ರುದ್ದೀನ್ ಪಟೇಲ್ ಟ್ರಸ್ಟಿನ ಧ್ಯೇಯೊದ್ದೇಶ ಹಾಗೂ ಅದರ ಕಾರ್ಯವೈಕರ್ಯವನ್ನು ವಿವರಿಸಿದರು.

ಟ್ರಸ್ಟ್ ನ ಪ್ರಧಾನ ಕಾರ್ಯಧರ್ಶಿ ಮುಕ್ತಾರ್ ಪಟೇಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜ ಸೇವೆಗಳು ಇಂತಹ ಟ್ರಸ್ಟ್‌ಗಳಿಂದ ಸಾಧ್ಯವಿದೆ, ಕಷ್ಟದಲ್ಲಿರುವವರಿಗೆ ಆರ್ಥಿಕ ಸಹಾಯ ನೀಡುವುದೊಂದೇ ಗುರಿಯಾಗಬಾರದು. ಕೇವಲ ಹಣದಿಂದ ಯಾರನ್ನೂ ತೃಪ್ತಿ ಪಡಿಸಲು ಸಾಧ್ಯವಿಲ್ಲದ ಈ ದಿನಗಳಲ್ಲಿ, ಜನರಿಗೆ ನಿಶ್ಚಿತ ಗುರಿಯ ಅರಿವು ಮೂಡಿಸುವುದರೊಂದಿಗೆ ಸಮಾಜಕ್ಕೆ ಉಪಯುಕ್ತವಾದ ತಿಳುವಳಿಕೆ ನೀಡುವ ವ್ಯವಸ್ಥೆಯಾಗಬೇಕು. ವ್ಯವಸ್ಥೆ ಒಗ್ಗೂಡಿಸುವುದೇ ಟ್ರಸ್ಟ್‌ಗಳು ಸಮಾಜಕ್ಕೆ ನೀಡುವ ದೊಡ್ಡ ಕೊಡುಗೆ ಎಂದರು. ಅಂಗವಿಕಲರು ತಮ್ಮ ಕೀಳರಿಮೆ ಬದಿಗೊತ್ತಿ ತಮಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ದೊರೆಯುವ ಸವಲತ್ತುಗಳನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ಮೂಲಕ ಸಮಾಜದಲ್ಲಿ ವಿಶೇಷವಾಗಿ ಗುರುತಿಸಿಕೊಂಡು ಇತರರಿಗೆ ಪ್ರೇರಣೆಯಾಗಬೇಕು, ಅಂಗವಿಕಲರ ಕಲ್ಯಾಣಕ್ಕಾಗಿ ವಿವಿಧ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸುತ್ತಿದ್ದು ಇಂತಹ ಕಾರ್ಯಕ್ರಮಗಳಿಗೆ ಪಟೇಲ್ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಕೈ ಜೋಡಿಸಬೇಕಾಗಿದೆ ಎಂದರು.
ಉದ್ಯಮಿ ಹಾಗೂ ಟ್ರಸ್ಟ್ ನ ಸಲಹಾ ಸಮಿತಿಯ ಸದಸ್ಯರಾದ  ಹಾಜಿ ಅಹ್ಮದ್ ಕುಂಙಿ ಪಟೇಲ್  ಉದ್ಘಾಟಿಸಿ, ಟ್ರಸ್ಟ್‌ ನ ಪ್ರಥಮ ಹೆಜ್ಜೆಯನ್ನು ಶ್ಲಾಘಿಸಿದರು. ಅಂಗವಿಕಲರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಮತ್ತು ಶಿಕ್ಷಣ ನೀಡಿ ಅವರನ್ನು ಸಬಲೀಕರಣಗೊಳಿಸುವಲ್ಲಿ ಸಹಕಾರಿಯಾಗಬೇಕಿದೆ ಎಂದರು.
ಆರಂತೋಡು ಜುಮಾ ಮಸೀದಿ ಆಧ್ಯಕ್ಷರು ಹಾಗೂ ಪಟೇಲ್ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಸಲಹಾ ಸಮಿತಿ ಸದಸ್ಯ ಮುಹಮ್ಮದ್ ಕುಂಙಿ  ಅಧ್ಯಕ್ಷತೆ ವಹಿಸಿದ್ದರು. ಸಲಹಾ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ಪಟೇಲ್, ಅಬ್ದುಲ್ ರಹ್ಮಾನ್ ಪಟೇಲ್, ಅಬ್ದುಲ್ಲಾ ಶರೀಫ್ ಪಟೇಲ್ ಹಾಗೂ ಟ್ರಸ್ಟ್ ನ ಸದಸ್ಯರಾದ ಸರ್ಫ್ರಾಝ್ ಪಟೇಲ್, ಸೈಫುದೀನ್ ಪಟೇಲ್, ಅನ್ವರ್ ಪಟೇಲ್ ಉಪಸ್ಥಿತರಿದ್ದರು. ಟ್ರಸ್ಟ್ ಕೋಶಾಧಿಕಾರಿ ನಾಸಿರುದ್ದೀನ್ ಪಟೇಲ್ ಕಾರ್ಯಕ್ರಮ ನಿರೂಪಿಸಿದರು ಹಾಗೂ ಟ್ರಸ್ಟ್‌ ನ ಕಾರ್ಯದರ್ಶಿ ಸಿಂಸಾರ್ ಪಟೇಲ್ ವಂದಿಸಿದರು.

share
ಮಮ್ತಾಜ್ ಮುಕ್ತಾರ್ ಅಲಿ
ಮಮ್ತಾಜ್ ಮುಕ್ತಾರ್ ಅಲಿ
Next Story
X