ಪೋಖ್ರಾನ್ ಪರಮಾಣು ಪರೀಕ್ಷೆ : ಮೋದಿಯಿಂದ ವಾಜಪೇಯಿ ಪ್ರಶಂಸೆ
ಹೊಸದಿಲ್ಲಿ,ಮೇ 11: ಗುರುವಾರ 1998ರ ಪೋಖ್ರಾನ್ ಪರಮಾಣು ಪರೀಕ್ಷೆಯ ವಾರ್ಷಿಕೋತ್ಸವ ಮತ್ತು ರಾಷ್ಟ್ರೀಯ ತಂತ್ರಜ್ಞಾನ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಪ್ರದರ್ಶಿಸಿದ್ದ ಧೈರ್ಯವನ್ನು ಪ್ರಶಂಸಿಸಿದ್ದಾರೆ.
1998ರಲ್ಲಿ ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ ವೇಳೆ ಪ್ರದರ್ಶಿಸಿದ್ದ ಧೈರ್ಯಕ್ಕಾಗಿ ವಿಜ್ಞಾನಿಗಳು ಮತ್ತು ಆಗಿನ ರಾಜಕೀಯ ನಾಯಕತ್ವಕ್ಕೆ ನಾವು ಚಿರಋಣಿಗಳಾಗಿದ್ದೇವೆ ಎಂದು ಮೋದಿ ಟ್ವೀಟಿಸಿದ್ದಾರೆ.
.ಭಾರತವು ಆಗಿನ ಪ್ರಧಾನಿ ವಾಜಪೇಯಿಯವರ ನೇತೃತ್ವದಲ್ಲಿ 1998 ಮೇ 11ರಂದು ಪೋಖ್ರಾನ್ ಪರಮಾಣು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದು, 1999ರಿಂದ ಈ ದಿನವನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ಪರೀಕ್ಷೆಯು ಭಾರತದ ಶಕ್ತಿಯನ್ನು ಇಡೀ ವಿಶ್ವಕ್ಕೆ ಪ್ರದರ್ಶಿಸಿತ್ತು.
Next Story