ವಿದ್ಯೋದಯ ಪಪೂ ಕಾಲೇಜು: ವಿಜ್ಞಾನ ವಿಭಾಗದಲ್ಲಿ 100 ಶೇ., ವಾಣಿಜ್ಯ ವಿಭಾಗದಲ್ಲಿ 98.44 ಶೇ. ಫಲಿತಾಂಶ

ಉಡುಪಿ, ಮೇ 11: ಉಡುಪಿ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜು 2017ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶೇ.100 ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.98.44 ಫಲಿತಾಂಶ ದಾಖಲಿಸಿದೆ.
ಈ ಬಾರಿ ವಿಜ್ಞಾನ ವಿಭಾಗದಲ್ಲಿ 189 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 122 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 66 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಿತಿಕಾ ಡಿ. ಮತ್ತು ಭವಾನಿ ಆರ್. ನಾಯಕ್ ತಲಾ 590 ಅಂಕ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 64 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 28 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 33 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎ.ಎಲ್.ಛಾತ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





