ಹೊಳೆಗೆ ಬಿದ್ದು ಮೃತ್ಯು
ಕೋಟ, ಮೇ 8: ಬನ್ನಾಡಿ ಗ್ರಾಮದ ಉಪ್ಲಾಡಿ ಎಂಬಲ್ಲಿ ಹೊಳೆಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತ ಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಉಪ್ಲಾಡಿಯ ಕರಿಯ ಬತ್ತಡ(70) ಎಂದು ಗುರುತಿಸಲಾಗಿದೆ. ಇವರು ಮೇ 8ರಂದು ಬೆಳಗ್ಗೆ ಮನೆಯಿಂದ ಸಾಲಿಗ್ರಾಮ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದು, ಮೇ10ರಂದು ಉಪ್ಲಾಡಿ ಹೊಳೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ.
ಹೊಳೆಯ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





