Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಗರಾಜ್, ಪುತ್ರರಿಬ್ಬರು 10 ದಿನ ಪೊಲೀಸ್...

ನಾಗರಾಜ್, ಪುತ್ರರಿಬ್ಬರು 10 ದಿನ ಪೊಲೀಸ್ ವಶಕ್ಕೆ

ವಿಶೇಷ ಪೊಲೀಸ್ ತಂಡಕ್ಕೆ 2 ಲಕ್ಷ ರೂ. ಬಹುಮಾನ

ವಾರ್ತಾಭಾರತಿವಾರ್ತಾಭಾರತಿ12 May 2017 8:52 PM IST
share
ನಾಗರಾಜ್, ಪುತ್ರರಿಬ್ಬರು 10 ದಿನ ಪೊಲೀಸ್ ವಶಕ್ಕೆ

ಬೆಂಗಳೂರು, ಮೇ 12: ಅಮಾನ್ಯಗೊಂಡಿದ್ದ ನೋಟುಗಳ ಬದಲಾವಣೆ ದಂಧೆಯಲ್ಲಿ ತೊಡಗಿದ್ದ ಪ್ರಕರಣ ಸಂಬಂಧ ಬಂಧನವಾಗಿರುವ ರೌಡಿಶೀಟರ್ ವಿ.ನಾಗರಾಜ್ ಹಾಗೂ ಪುತ್ರರಿಬ್ಬರನ್ನು 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಬೆಂಗಳೂರಿನ 11ನೆ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಶುಕ್ರವಾರ ಮಧ್ಯಾಹ್ನ 3ರ ಸುಮಾರಿಗೆ ಹೆಣ್ಣೂರು ಠಾಣೆ ಪೊಲೀಸರು, ನಾಗರಾಜ್ ಹಾಗೂ ಪುತ್ರರಾದ ಗಾಂಧಿ, ಶಾಸ್ತ್ರಿ ಅವರನ್ನು ನಗರದ ಮೇಯೋಹಾಲ್ ನ್ಯಾಯಾಲಯದ ಆವರಣದಲ್ಲಿರುವ 11ನೆ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಪೊಲೀಸರು 15 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ನಾಗನ ಪರ ವಕೀಲರು ಮೂರು-ನಾಲ್ಕು ದಿನಗಳ ಕಾಲ ಮಾತ್ರ ನಾಗನನ್ನು ಪೊಲೀಸ್ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ-ಪ್ರತಿವಾದವನ್ನು ಆಲಿಸಿದ 11ನೆ ಎಸಿಎಂಎಂ ನ್ಯಾಯಾಲಯ ರೌಡೀಶೀಟರ್ ನಾಗರಾಜ್ ಹಾಗೂ ಆತನ ಇಬ್ಬರು ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿಯನ್ನು 10 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

2 ಲಕ್ಷ ಬಹುಮಾನ: ಕಾರ್ಯಾಚರಣೆ ನಡೆಸಿ ವಿ.ನಾಗರಾಜ್ ಮತ್ತು ಪುತ್ರರಿಬ್ಬರನ್ನು ಬಂಧಿಸಿರುವ ಬಾಣಸವಾಡಿ ಎಸಿಪಿ ರವಿಕುಮಾರ್ ನೇತೃತ್ವದ ಪೊಲೀಸ್ ತಂಡಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್‌ಸೂದ್ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ನಾಗನನ್ನು ತಮಿಳುನಾಡಿನ ಆರ್ಕಾಟ್‌ನಲ್ಲಿ ಗುರುವಾರ ಸೆರೆಹಿಡಿದ ಬೆಂಗಳೂರು ಪೊಲೀಸರು ಅದೇ ದಿನ ರಾತ್ರಿ ಬೆಂಗಳೂರಿಗೆ ಕರೆತಂದು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ್ದರು ಎಂದು ಗೊತ್ತಾಗಿದೆ.

ಹಿಂದೆ ಸರಿದ ವಕೀಲ: ನಾಗನ ಬಂಧನದ ನಂತರ ಆತನ ಪರ ವಕೀಲ ಶ್ರೀರಾಮರೆಡ್ಡಿ ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ತಾವು ನೀಡಿದ ಸಲಹೆಗಳನ್ನು ನಾಗರಾಜ್ ಸ್ವೀಕರಿಸದ ಹಿನ್ನೆಲೆಯಲ್ಲಿ ಬೇಸರಗೊಂಡು ನಾಗನ ಪ್ರಕರಣದಿಂದ ನಿವೃತ್ತಿ ಪಡೆಯುತ್ತಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
"ಗುರುವಾರ ಪೊಲೀಸರು ಬೆನ್ನಟ್ಟಿದಾಗಲೂ ನಾಗ ನನಗೆ ಕರೆ ಮಾಡಿದ್ದ, ನನ್ನ ಸಲಹೆಗಳು ಆತನಿಗೆ ಇಷ್ಟವಾಗಲಿಲ್ಲ. ಈ ಹಿನ್ನೆಲೆಯಲ್ಲಿ ನಾನು ಪ್ರಕರಣದಿಂದ ಹಿಂದೆ ಸರಿಯುತ್ತಿದ್ದೇನೆ.  20 ವರ್ಷಗಳಿಂದ ನಾಗನ ಪರ ವಕಾಲತ್ತು ವಹಿಸಿದ್ದೇನೆ" ಎಂದು ಶ್ರೀರಾಮರೆಡ್ಡಿ ಹೇಳಿದರು.

ಲಕ್ಷ್ಮಿ ಬಂಧನಕ್ಕೆ ಕ್ರಮ: ಹಳೆ ನೋಟು ಬದಲಾವಣೆ ದಂಧೆಯಲ್ಲಿ ನಾಗನ ಪತ್ನಿ ಲಕ್ಷ್ಮಿ ನಾಗರಾಜ್ ತೊಡಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಹೆಣ್ಣೂರು ಠಾಣಾ ಪೊಲೀಸರು ಆಕೆಯನ್ನು ಬಂಧಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಬಂಧನದಲ್ಲಿರುವ ನಾಗರಾಜ್ ಸಹಚರ ಸೌಂದರ್ಯ ರಾಜ್, ಲಕ್ಷ್ಮಿ ಕೂಡ ದಂಧೆಯಲ್ಲಿ ತೊಡಗಿದ್ದಳು ಎಂದು ಹೇಳಿದ್ದಾನೆ ಎನ್ನಲಾಗಿದೆ. ಆದರೆ, ಗುರುವಾರದಿಂದ ಶ್ರೀರಾಂಪುರದಲ್ಲಿರುವ ನಿವಾಸಕ್ಕೆ ಬೀಗ ಹಾಕಿ ಲಕ್ಷ್ಮಿ ಪರಾರಿಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X