ನಕಲಿ ಶಾರ್ಟ್ಸ್ ಮಾರಾಟ: ಇಬ್ಬರ ಬಂಧನ

ಬೆಂಗಳೂರು, ಮೇ 12: ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ಶಾರ್ಟ್ಸ್ ತಯಾರಿಸಿ ಮಾರಾಟ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ ಸುಮಾರು 3,935 ನಕಲಿ ಶಾರ್ಟ್ಸ್‌ಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ನಗರದ ರಾಮಚಂದ್ರಪುರ 1ನೆ ಮುಖ್ಯರಸ್ತೆಯ ವೇಣುಗೋಪಾಲ್(32), ಓಕಳಿಪುರಂನ ವಿನೀತ್‌ರಾಜ್ ಬಂಧಿತ ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.
ಆರೋಪಿ ಮೇಣುಗೋಪಾಲ್ ಇಲ್ಲಿನ ಓಕಳಿಪುರಂನ ಅಂಗಡಿಯೊಂದರಲ್ಲಿ ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ಶಾರ್ಟ್ಸ್‌ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ವೇಣುಗೋಪಾಲ್‌ನಿಂದ ನಕಲಿ ಶಾರ್ಟ್ಸ್‌ಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಶ್ರೀರಾಂಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂಡಲಪಾಳ್ಯದ ಸಂಜೀನಿ ನಗರದ ಫ್ಯಾಕ್ಟರಿಯೊಂದರಲ್ಲಿ ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ಶಾರ್ಟ್ಸ್‌ಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ವಿನೀತ್‌ರಾಜ್ ಬಳಿಯಿಂದ ನಕಲಿ ಶಾರ್ಟ್ಸ್‌ಗಳನ್ನು ವಶಕ್ಕೆ ಪಡೆದು ಇಲ್ಲಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.







