ಟ್ರ್ಯಾಕ್ಟರ್ ಅಪಘಾತ: ಚಾಲಕ ಸಾವು
ಮುಂಡಗೋಡ, ಮೇ 12: ಟ್ರ್ಯಾಕ್ಟರ್ ಮೂಲಕ ಗದ್ದೆಯ ಕೆಲಸದಲ್ಲಿ ನಿರತನಾಗಿದ್ದ ವ್ಯಕ್ತಿಯ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಎತ್ತರದ ಪ್ರದೇಶದಿಂದ ಚಾಲಕನ ಸಮೇತ ಹಳಕ್ಕೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಇಂದಿರಾನಗರದ ಕೊಪ್ಪ ಹಳ್ಳದಲ್ಲಿ ಗುರುವಾರ ಸಂಜೆ ನಡೆದಿದೆ
ಪಟ್ಟಣದ ನೂರಾನಿ ಓಣಿಯ ಮುನಾಫ್ ಬಡೆಸಾಬ್ ಮಲ್ಲಿಗಾರ(30) ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಟ್ರಾಕ್ಟರ್ ಮೂಲಕ ಕೃಷಿ ಚಟುವಟಿಕೆ ನಡೆಸುತ್ತಿದ್ದಾಗ ಇಳಿ ಜಾರು ಪ್ರದೇಶದಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ನೂರಾರು ಜನ ಘಟನಾ ಸ್ಥಳಕ್ಕೆ ದೌಡಾಯಿಸಿದರು. ಕುಟುಂಬದ ಅಕ್ರಂದನ ಮುಗಿಲು ಮುಟ್ಟಿತ್ತು. ಚಾಲಕನ ಒಳ್ಳೆಯ ಗುಣವೇ ನೂರಾರು ಜನ ಸೇರಲು ಕಾರಣವೆಂದು ಹೇಳಲಾಗಿದೆ.
ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





