Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್...

ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಕಡ್ಡಾಯ ನಿಷೇಧ: ಡಿಸಿ

ವಾರ್ತಾಭಾರತಿವಾರ್ತಾಭಾರತಿ12 May 2017 11:02 PM IST
share
ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಕಡ್ಡಾಯ ನಿಷೇಧ: ಡಿಸಿ

ಉಡುಪಿ, ಮೇ 12: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ದಿನಬಳಕೆಯ ವಸ್ತುಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಎಲ್ಲಾ ಹೊಟೇಲ್, ಬಾರ್-ರೆಸ್ಟೋರೆಂಟ್, ಮಾಲ್, ಪ್ರೊವಿಜನ್ ಸ್ಟೋರ್ಸ್‌ ಮತ್ತು ಬುಕ್ ಸೆಂಟರ್‌ಗಳಲ್ಲಿ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ವಸ್ತುಗಳನ್ನು ನೀಡದಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತು ನಡೆದ ಸಬೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
   ಎಲ್ಲಾ ವ್ಯಾಪಾರಸ್ಥರು ಪ್ಲಾಸ್ಟಿಕ್‌ಗೆ ಪರ್ಯಾಯವಾದ ವಸ್ತುಗಳನ್ನು ಬಳಕೆ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಗ್ರಾಹಕರಿಗೆ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ನಿಂದ ಮಾಡಿದ ಕವರ್, ನಾನ್ ಓವನ್ ಬ್ಯಾಗ್‌ಗಳು ಅಥವಾ ಬ್ಯಾಗ್‌ಗಳಲ್ಲಿ ವಸ್ತುಗಳನ್ನು ನೀಡದಂತೆ ಸೂಚಿಸಿದರು. ಬಟ್ಟೆ ಮತ್ತು ಪೇಪರ್‌ನಿಂದ ಮಾಡಿದ ಬ್ಯಾಗ್‌ಗಳಲ್ಲಿ ವಸ್ತುಗಳನ್ನು ಮಾರಾಟ ಮಾಡುವಂತೆ ಹಾಗೂ ಈ ರೀತಿಯ ಬ್ಯಾಗ್‌ಗಳನ್ನು ಜಿಲ್ಲೆಯ ಹಲವು ಸ್ವ ಸ್ವಹಾಯ ಸಂಘಗಳು ತಯಾರಿಸುತಿದ್ದು, ಅಲ್ಲಿಂದ ಖರೀದಿಸುವಂತೆ ತಿಳಿಸಿದರು.
 

ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಸಭೆಯಲ್ಲಿ ಹಾಜರಿದ್ದ ವ್ಯಾಪಾರಿಗಳು ಸಹಮತ ವ್ಯಕ್ತಪಡಿಸಿ, ಸ್ಥಳೀಯವಾಗಿ ಯಾವುದೇ ಪ್ಲಾಸ್ಟಿಕ್ ಬ್ಯಾಗ್ ತಯಾರಾಗುತ್ತಿಲ್ಲ. ಹೊರ ರಾಜ್ಯಗಳಿಂದ ಜಿಲ್ಲೆಗೆ ಪ್ಲಾಸ್ಟಿಕ್ ಕವರ್‌ಗಳು ಬರುತ್ತಿದ್ದು, ಇದನ್ನು ತಡೆಯುವಂತೆ ಜಿಲ್ಲಾಧಿಕಾರಿಗಳನ್ನು ಕೋರಿದರು. ಈ ಕುರಿತಂತೆ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಚೆಕ್ ಪೋಸ್ಟ್ ಪ್ರಾರಂಭಿಸಿ, ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
  
 ನಗರಸಭೆ ವತಿಯಿಂದ ಎಲ್ಲಾ ವ್ಯಾಪಾರಸ್ಥರೊಂದಿಗೆ ಬಟ್ಟೆ ಮತ್ತು ಪೇಪರ್ ಬ್ಯಾಗ್ ತಯಾರಿಸುವ ಸ್ವಸಹಾಯ ಸಂಘಗಳ ಸದಸ್ಯರೊಂದಿಗೆ ಮುಖಾಮುಖಿ ಹಾಗೂ ಬಟ್ಟೆ ಮತ್ತು ಪೇಪರ್‌ನಿಂದ ತಯಾರಿಸಿದ ವಸ್ತುಗಳ ಪ್ರದರ್ಶನ ಏರ್ಪಡಿಸುವಂತೆ ಪೌರಾಯುಕ್ತ ಮಂಜುನಾಥಯ್ಯಗೆ ಡಿಸಿ ಸಲಹೆ ನೀಡಿದರು.

ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿಯ ಕುರಿತು ವಿವರಿಸಿದ ಜಿಲ್ಲಾಧಿಕಾರಿ ಗಳು, ಎಲ್ಲಾ ವರ್ತಕರು ತಮ್ಮಲ್ಲಿಗೆ ಬರುವ ಗ್ರಾಹಕರಿಗೆ ಪರಿಸರ ಸ್ನೇಹಿ ಬ್ಯಾಗ್ ಮತ್ತು ವಸ್ತುಗಳ ಬಳಕೆಗೆ ಮನವೊಲಿಸುವ ಮೂಲಕ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಹಾಗೂ ಸ್ವಚ್ಛ ಮತ್ತು ಸುಂದರ ಜಿಲ್ಲೆಯನ್ನಾಗಿಸಲು ಸಹಕರಿಸುವಂತೆ ತಿಳಿಸಿದರು.

ಸಭೆಯಲ್ಲಿ ನಗರಸಭೆಯ ಪರಿಸರ ಎಂಜಿನಿಯರ್ ರಾಘವೇಂದ್ರ, ಜಿಲ್ಲಾ ಪರಿಸರ ಅಧಿಕಾರಿ ಲಕ್ಷ್ಮಿಕಾಂತ್, ನಗರದ ಹಲವಾರು ಮಂದಿ ವರ್ತಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X