ಎಸೆಸೆಲ್ಸಿಯಲ್ಲಿ ಸ್ನೇಹಿತೆಗಿಂತ ಕಡಿಮೆ ಅಂಕ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ದಾವಣಗೆರೆ, ಮೇ 12: ಎಸೆಸೆಲ್ಸಿ ಪರೀಕ್ಷೆಯಲ್ಲಿ ತನ್ನ ಸ್ನೇಹಿತೆಗಿಂತ ಕಡಿಮೆ ಅಂಕ ಬಂದಿದೆ ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ತಾಲೂಕಿನಲ್ಲಿ ನಡೆದಿದೆ.
ಜಗಳೂರು ತಾಲೂಕು ಗೋಪಾಲಪುರ ಗ್ರಾಮದ ಪ್ರಭು ಎಂಬವರ ಪುತ್ರಿ ಮಮತಾ (15) ಆತ್ಮ ಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಸೆಸೆಲ್ಸಿ ಪರೀಕ್ಷೆಯಲ್ಲಿ ತನ್ನ ಸ್ನೇಹಿತೆಗಿಂತಲೂ ಕಡಿಮೆ ಅಂಕ ಬಂದಿದ್ದರಿಂದ ಬೇಸರಗೊಂಡಿದ್ದ ಮಮತಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತಾದರೂ ಆಕೆ ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





