ಎಸೆಸೆಲ್ಸಿ: ಡಿ.ಜೆ ಶಾಲೆಗೆ ಸತತ ಮೂರನೆ ಬಾರಿ ಶೇ.100 ಫಲಿತಾಂಶ

ಮೂಡುಬಿದಿರೆ, ಮೇ 13: ಇಲ್ಲಿನ ಡಿ.ಜೆ. ಆಂಗ್ಲ ಮಾಧ್ಯಮ ಶಾಲೆ ಸತತ ಮೂರನೆಯ ವರ್ಷ ಎಸೆಸೆಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಪಡೆದುಕೊಂಡಿದೆ.
ಆಕಾಶ್ ಎಲ್.ಎಂ 598 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ, ರಕ್ಷಿತಾ 595 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 33 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 16 ವಿದ್ಯಾರ್ಥಿಗಳು ವಿಶೇಷ ಶ್ರೇಣಿ ಮತ್ತು 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಆರು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.
Next Story





