Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ...

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೂತನ ಪ್ರಯೋಗಶಾಲೆ

ವಾರ್ತಾಭಾರತಿವಾರ್ತಾಭಾರತಿ13 May 2017 7:08 PM IST
share
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೂತನ ಪ್ರಯೋಗಶಾಲೆ

ದಾವಣಗೆರೆ, ಮೇ 13: ಪರಿಸರ ಕಾಪಾಡುವ ನಿಟ್ಟಿನಲ್ಲಿ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೂರಕ ವ್ಯವಸ್ಥೆ ಅತಿ ಮುಖ್ಯವಾಗಿದ್ದು, ದಾವಣಗೆರೆಯಲ್ಲಿ 5.33 ಕೋಟಿ ರೂ. ವೆಚ್ಚದಲ್ಲಿ ನೂತನ ಪ್ರಯೋಗಶಾಲೆಯನ್ನು ನಿರ್ಮಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಹೇಳಿದರು.

ನಗರದ ದೇವರಾಜ ಅರಸ್ ಬಡಾವಣೆಯಲ್ಲಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ನೂತನ ಪ್ರಯೋಗ ಶಾಲೆ ಕಟ್ಟಡದ ಶಂಕುಸ್ಥಾಪನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
 

ಜಿಲ್ಲೆಯಲ್ಲಿ ಅನೇಕ ಕಾರ್ಖಾನೆಗಳಿದ್ದು, ಅವುಗಳು ಪರಿಸರ ಕಾಪಾಡುವ ನಿಟ್ಟಿನಲ್ಲಿ ನಿಬಂಧನೆಗಳನ್ನು ಸಮರ್ಪಕವಾಗಿ ಪಾಲಿಸುತ್ತಿದ್ದಾವೋ ಇಲ್ಲವೋ ಎಂದು ಪರಿವೀಕ್ಷಿಸಲು ಪ್ರಯೋಗಾಲಯ ಅತ್ಯವಶ್ಯವಾಗಿದೆ. ಮಂಡಳಿಗೆ ಸುಪ್ರೀಂ ಕೋರ್ಟ್‌ನಿಂದ ಅನೇಕ ನಿರ್ದೇಶನಗಳು ಬಂದಿದ್ದು ಅದರಂತೆ ಎಲ್ಲ ಕಾರ್ಖಾನೆಗಳು ಮೂರು ತಿಂಗಳ ಒಳಗೆ ಪ್ರಿಲಿಮಿನರಿ ಟ್ರೀಟ್‌ಮೆಂಟ್ ಪ್ಲಾಂಟ್ ಅಳವಡಿಸಬೇಕು. ಈ ನಿರ್ದೇಶನ ಪಾಲಿಸದ ಕೈಗಾರಿಕೆಗಳ ವಿರುದ್ಧ ಕ್ರಿಮಿನಲ್ ಕೇಸ್ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಕೆರೆ-ನಾಲೆಗಳ ಸಂರಕ್ಷಣೆ ನಮ್ಮ ಕರ್ತವ್ಯವಾಗಿದ್ದು ಈ ಕುರಿತು ದೆಹಲಿ ಕ್ರಿಮಿನಲ್ ಬ್ರಾಂಚ್ ಇಂದ ಕೂಡ ಕಠಿಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.
 ಈಗಾಗಲೇ 500 ಕೈಗಾರಿಕೆಗಳನ್ನು ಸ್ಥಗಿತಗೊಳಿಸಲು ನಿರ್ದೇಶನ ಬಂದಿದ್ದು ಅದು ಪ್ರಗತಿಯಲ್ಲಿದೆ. ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೈಗಾರಿಕೀಕರಣ ಮತ್ತು ನಗರೀಕರಣ ಅಗತ್ಯವಾದರೂ ಅದು ಪರಿಸರದ ವಿರುದ್ಧವಾಗಿರಬಾರದು. ಪರಿಸರವನ್ನು ನಾವೇ ಹಾಳು ಮಾಡುತ್ತಿದ್ದು, ಕಠಿಣ ಕ್ರಮ ಜರುಗಿಸುವುದು ಮಂಡಳಿಗೆ ಅನಿವಾರ್ಯವಾಗಿದೆ ಎಂದು ಹೇಳಿದರು.
ನಗರ ಪಾಲಿಕೆ ತ್ಯಾಜ್ಯ ವಸ್ತು ನಿರ್ವಹಣೆ ದೊಡ್ಡ ಜವಾಬ್ದಾರಿಯಾಗಿದ್ದು, ಸಾರ್ವಜನಿಕರು ತಮ್ಮ ಮನೆಯಿಂದಲೇ ತ್ಯಾಜ್ಯಗಳನ್ನು ವಿಂಗಡಣೆ ಮಾಡಿ ಕೊಡಬೇಕು. ಆಗ ಪರಿಸ್ಥಿತಿ ಸುಧಾರಿಸುತ್ತದೆ. ವೈಜ್ಞಾನಿಕ ಕಸ ವಿಲೇವಾರಿಗೆ ಅವಕಾಶವಿದ್ದು, ಹಣ, ತಂತ್ರಜ್ಞಾನ ಮತ್ತು ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕೆಂಬ ಇಚ್ಛಾಶಕ್ತಿಯಿಂದ ಇದನ್ನು ಸಾಕಾರಗೊಳಿಸಬಹುದು.
ಮಂಡಳಿ ವತಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳ ಕೇಂದ್ರ ಸ್ಥಾನದಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ತಲಾ 1.35 ಕೋಟಿ ರೂ. ವೆಚ್ಚದಲ್ಲಿ ವಾಯು ಕೇಂದ್ರ (ಏರ್ ಸ್ಟೇಷನ್) ಸ್ಥಾಪಿಸಲಾಗುವುದು. ಈಗಾಗಲೇ ಗುಲ್ಬರ್ಗ, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನಲ್ಲಿ 5 ಸ್ಟೇಷನ್‌ಗಳನ್ನು ಸ್ಥಾಪಿಸಲಾಗಿದೆ. ಈ ಸ್ಟೇಷನ್‌ಗಳ ಸಂಖ್ಯೆ ಹೆಚ್ಚಾದಷ್ಟು ವಾಯು ಮಾಲಿನ್ಯ ತಡೆಗಟ್ಟುವಲ್ಲಿ ಸಹಕಾರಿಯಾಗುತ್ತದೆ. ಒಟ್ಟಾರೆ ಪರಿಸರ ಕಾಪಾಡುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರಯೋಗ ಶಾಲೆಗಳನ್ನು ಬಲಪಡಿಸಬೇಕಿದೆ. ಪ್ರತಿ ಜಿಲ್ಲೆಯಲ್ಲಿ ಸುಸಜ್ಜಿತ ಪ್ರಯೋಗಶಾಲೆ ನಿರ್ಮಿಸಿದಲ್ಲಿ ಕೈಗಾರಿಕೆಗಳ ಮಾನದಂಡಗಳನ್ನು ಪರಿವೀಕ್ಷಿಸಿ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ಸಿಗುತ್ತದೆ ಎಂದ ಅವರು ಇನ್ನು 10-12 ತಿಂಗಳಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದ್ದು, ಆದಷ್ಟು ಬೇಗ ಕಾರ್ಯಾರಂಭ ಮಾಡಲಿ ಎಂದು ಆಶಿಸಿದರು.

ಮಹಾನಗರ ಪಾಲಿಕೆ ಮಹಾಪೌರರಾದ ಅನಿತಾಭಾಯಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಎಂ ವೆಂಕಟರಾಮ ಮಾತನಾಡಿ, ಪರಿಸರ ಮಾಲಿನ್ಯಕ್ಕೆ ನಾವೇ ಕಾರಣಕರ್ತರು. ಹಿಂದೆಲ್ಲ ಗ್ರಾಮ ಮಟ್ಟದಲ್ಲೇ ಮಾಲಿನ್ಯದ ವಿರುದ್ಧ ಕ್ರಮ ಜರುಗಿಸಲಾಗುತ್ತಿತ್ತು. ಈಗ ಎಲ್ಲೆ ಮೀರಿ ಪರಿಸರ ನಾಶಕ್ಕೆ ಕಾರಣರಾಗುತ್ತಿದ್ದೇವೆ. ಆದ್ದರಿಂದ ಇದರ ವಿರುದ್ಧ ಕಾನೂನು ರೂಪಿಸುವುದು ಅನಿವಾರ್ಯವಾಗಿದ್ದು, ನಿಯಮಗಳನ್ನು ಪಾಲಿಸಿ ಪ್ರಕೃತಿ ಉಳಿಸಬೇಕಿದೆ ಎಂದು ಕರೆ ನೀಡಿದರು.
ಕ ರಾ ಮಾ ನಿ ಮಂಡಳಿಯ ಚಿತ್ರದುರ್ಗ ವಿಭಾಗೀಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಎಂ ಕೆ ಪ್ರುದೇವ , ದಾವಣಗೆರೆಯ ಕ.ರಾ.ಮಾ.ನಿ.ಮಂಡಳಿ ಪರಿಸರ ಅಧಿಕಾರಿ ಕೆ ಎಸ್ ಮಂಜುನಾಥ್ ಸ್ವಾಗತಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಗೌರಮ್ಮ ಚಂದ್ರಪ್ಪ, ಮಂಡಳಿಯ ಸದಸ್ಯರಾದ ಡಾ. ಮಂಜಪ್ಪ, ರುದ್ರೇಶ್, ಸಿ ಡಿ ಕುಮಾರ್, ಎ ರಮೇಶ್, ಹರಿಶಂಕರ್, ಮಹೇಶ್ವರಪ್ಪ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X