ಮುಂಡಗೋಡ, ಮೇ 13: ಮನೆಯ ಬಾಗಿಲಿನ ಚಿಲಕ ಮುರಿದು ಚಿನ್ನಾಭರಣ ಹಾಗೂ ನಗದು ಕಳ್ಳತನವಾದ ಘಟನೆ ಪಟ್ಟಣದ ಗಾಂಧಿನಗರದಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ.
ಮಹಾಂತಯ್ಯ ತಿರಕಯ್ಯ ಜವಳಿಮಠ ಎಂಬುವರ ಮನೆಯಲ್ಲಿ ಕಳವು ನಡೆದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.