ಪಿಯುಸಿಯಲ್ಲಿ ಕಡಿಮೆ ಅಂಕ: ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಮಂಡ್ಯ, ಮೇ 13: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷೆಯಷ್ಟು ಅಂಕ ಬರಲಿಲ್ಲವೆಂಬ ಕಾರಣಕ್ಕೆ ವಿದ್ಯಾರ್ಥಿನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ರೈಲ್ವೆ ನಿಲ್ದಾಣದ ನಂಜಪ್ಪ ಕಲ್ಯಾಣ ಮಂಟಪದ ಬಳಿ ನಡೆದಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕನ್ನಸಂದ್ರ ಗ್ರಾಮದ ಸುರೇಂದ್ರ ಎಂಬವರ ಪುತ್ರಿ ಕೆ.ಎಸ್.ನಿಖಿತಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಆಕೆ ಚನ್ನಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದಿದ್ದಳು.
ನಿಖಿತಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಬರುವುದಾಗಿ ನಿರೀಕ್ಷೆಯಿಟ್ಟುಕೊಂಡಿದ್ದು, ಅಷ್ಟು ಅಂಕ ಬರದಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





