ಆತ್ಮಹತ್ಯೆ
ಬೆಂಗಳೂರು, ಮೇ 14: ವ್ಯಕ್ತಿಯೊಬ್ಬ ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಾಗಶೆಟ್ಟಿಹಳ್ಳಿ ಲೇಔಟ್‌ನ ಭೂಸಂದ್ರ ನಿವಾಸಿ ಬೆಂಜಮಿನ್(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.
ಕುಡಿತದ ಚಟ ಹೊಂದಿದ್ದ ಈತ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ರಾತ್ರಿ ಮನೆಯಲ್ಲಿ ಚಾಕುನಿಂದ ಹೊಟ್ಟೆಗೆ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸಂಜಯನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
Next Story





