Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ಲೇ -ಆಫ್‌ಗೇರಿದ ಪುಣೆ ಸೂಪರ್‌ಜೈಂಟ್

ಪ್ಲೇ -ಆಫ್‌ಗೇರಿದ ಪುಣೆ ಸೂಪರ್‌ಜೈಂಟ್

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 9 ವಿಕೆಟ್‌ಗಳ ಜಯ

ವಾರ್ತಾಭಾರತಿವಾರ್ತಾಭಾರತಿ14 May 2017 9:56 PM IST
share
ಪ್ಲೇ -ಆಫ್‌ಗೇರಿದ ಪುಣೆ ಸೂಪರ್‌ಜೈಂಟ್

ಪುಣೆ, ಮೇ 14: ಇಲ್ಲಿ ನಡೆದ ಐಪಿಎಲ್ ಟ್ವೆಂಟಿ-20 ಟೂರ್ನಿಯ 55ನೆ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡ 9 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದ್ದು, ಅಂಕಪಟ್ಟಿಯಲ್ಲಿ ಎರಡನೆ ಸ್ಥಾನದೊಂದಿಗೆ ಪ್ಲೇ ಆಫ್‌ಗೆ ತೆರ್ಗಡೆಯಾಗಿದೆ.

ಮೇ 16ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ತಂಡವನ್ನು ಎದುರಿಸಲಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 74 ರನ್‌ಗಳ ಸುಲಭದ ಸವಾಲನ್ನು ಪಡೆದ ಪುಣೆ ತಂಡ ಇನ್ನೂ 48 ಎಸೆತಗಳನ್ನು ಬಾಕಿ ಉಳಿಸಿ 1 ವಿಕೆಟ್ ನಷ್ಟದಲ್ಲಿ 78 ರನ್ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.

ಇನಿಂಗ್ಸ್ ಆರಂಭಿಸಿದ ಅಜಿಂಕ್ಯ ರಹಾನೆ ಮತ್ತು ರಾಹುಲ್ ತ್ರಿಪಾಠಿ ತಾಳ್ಮೆಯಿಂದ ಬ್ಯಾಟ್ ಮಾಡಿ 5.2 ಓವರ್‌ಗಳಲ್ಲಿ 41 ರನ್ ಸೇರಿಸಿದರು. ಆದರೆ 5.3ನೆ ಓವರ್‌ನಲ್ಲಿ ಅಕ್ಷರ್ ಪಟೇಲರ ಎಸೆತವನ್ನು ಎದುರಿಸುವಲ್ಲಿ ಎಡವಿದ ತ್ರಿಪಾಠಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ತ್ರಿಪಾಠಿ 28 ರನ್(20ಎ, 4ಬೌ,1ಸಿ) ಗಳಿಸಿದರು.

ಎರಡನೆ ವಿಕೆಟ್‌ಗೆ ರಹಾನೆಗೆ ನಾಯಕ ಸ್ಟೀವ್ ಸ್ಮಿತ್ ಜೊತೆಯಾದರು. ಇವರು ಎರಡನೆ ವಿಕೆಟ್‌ಗೆ ಜೊತೆಯಾಟದಲ್ಲಿ 37 ರನ್ ಸೇರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ರಹಾನೆ ಅವರು ಔಟಾಗದೆ 34ರನ್ ಮತ್ತು ಸ್ಮಿತ್ ಔಟಾಗದೆ 15ರನ್ ಗಳಿಸಿದರು.

12ನೆ ಓವರ್‌ನಲ್ಲಿ ಮ್ಯಾಕ್ಸ್‌ವೆಲ್‌ರ ಕೊನೆಯ ಎಸೆತದಲ್ಲಿ ಚೆಂಡನ್ನು ಸಿಕ್ಸರ್‌ಗೆ ಅಟ್ಟಿದ ಮ್ಯಾಕ್ಸ್‌ವೆಲ್ ಗೆಲುವಿನ ರನ್ ಗಳಿಸಿದರು. ಕಿಂಗ್ಸ್ ಇಲೆವೆನ್ 14ಪಂದ್ಯಗಳಲ್ಲಿ 7 ನೆ ಸೋಲು ಅನುಭವಿಸಿ ಪ್ಲೇ ಆಫ್ ಅವಕಾಶವನ್ನು ಕೈ ಚೆಲ್ಲಿತು. ಅಂಕಪಟ್ಟಿಯಲ್ಲಿ 5ನೆ ಸ್ಥಾನದೊಂದಿಗೆ ಅಭಿಯಾನ ಕೊನೆಗೊಳಿಸಿತು.

ಪಂಜಾಬ್‌ನ ಕಳಪೆ ಪ್ರದರ್ಶನ: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 15.5 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲೌಟಾಗಿತ್ತು. ಪಂಜಾಬ್ ಒಂದು ವೇಳೆ ಗೆಲುವು ಸಾಧಿಸಿದ್ದರೆ ನಾಲ್ಕನೆ ಸ್ಥಾನದೊಂದಿಗೆ ಪ್ಲೇಆಫ್ ಸ್ಥಾನ ಪಡೆಯುವ ಅವಕಾಶ ಇತ್ತು. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್‌ನ ಇನಿಂಗ್ಸ್ ಆರಂಭ ಚೆನ್ನಾಗಿರಲಿಲ್ಲ. ಪುಣೆ ತಂಡದ ಜೈದೇವ್ ಉನದ್ಕಟ್ ಅವರ ಓವರ್‌ನ ಮೊದಲ ಎಸೆತದಲ್ಲಿ ಆರಂಭಿಕ ದಾಂಡಿಗ ಮಾರ್ಟಿನ್ ಗಪ್ಟಿಲ್(0) ಅವರು ಮನೋಜ್ ತಿವಾರಿಗೆ ಕ್ಯಾಚ್ ನೀಡುವುದರೊಂದಿಗೆ ಪೆವಿಲಿಯನ್ ಸೇರಿದರು.


 3 ಓವರ್‌ಗಳಲ್ಲಿ 1 ಮೇಡನ್‌ನೊಂದಿಗೆ 12ಕ್ಕೆ 2 ವಿಕೆಟ್ ಉಡಾಯಿಸಿದ ಉನದ್ಕಟ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
 
ಶಾರ್ದೂಲ್ ಠಾಕೂರ್(19ಕ್ಕೆ 3), ಆ್ಯಡಮ್ ಝಂಪಾ(22ಕ್ಕೆ 2) ಮತ್ತು ಡೇನಿಯಲ್ ಕ್ರಿಸ್ಟಿಯನ್(10ಕ್ಕೆ 2) ಸಂಘಟಿತ ದಾಳಿ ನಡೆಸಿ ಕಿಂಗ್ಸ್ ಇಲೆವೆನ್ ಪಂಜಾಬ್‌ನ್ನು ಬೇಗನೆ ಕಟ್ಟಿ ಹಾಕಿದರು. ಉನದ್ಕಟ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಪಂಜಾಬ್ ತಂಡದ ಪರ ಅಕ್ಷರ್ ಪಟೇಲ್ 22 ರನ್ ಗಳಿಸಿರುವುದು ತಂಡದ ಪರ ದಾಖಲಾದ ಗರಿಷ್ಠ ಸ್ಕೋರ್. ವಿಕೆಟ್ ಕೀಪರ್ ವೃದ್ದಿಮಾನ್ ಸಹಾ(13), ಶಾನ್ ಮಾರ್ಷ್(10), ಸ್ವಪ್ನಿಲ್ ಸಿಂಗ್(10) ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 

            

share
ವಾರ್ತಾಭಾರತಿ
ವಾರ್ತಾಭಾರತಿ
Next Story
X