Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎನ್‌ಆರ್‌ಐಗಳ ಮೂಲಕ ನೋಟು ಬದಲಾವಣೆ?...

ಎನ್‌ಆರ್‌ಐಗಳ ಮೂಲಕ ನೋಟು ಬದಲಾವಣೆ? ನಾಗರಾಜನ ವಿಚಾರಣೆ ಚುರುಕು

ವಾರ್ತಾಭಾರತಿವಾರ್ತಾಭಾರತಿ14 May 2017 10:41 PM IST
share
ಎನ್‌ಆರ್‌ಐಗಳ ಮೂಲಕ ನೋಟು ಬದಲಾವಣೆ? ನಾಗರಾಜನ ವಿಚಾರಣೆ ಚುರುಕು

ಬೆಂಗಳೂರು, ಮೇ 14: ಅಮಾನ್ಯಗೊಂಡಿರುವ ನೋಟುಗಳ ಬದಲಾವಣೆ ದಂಧೆಯಲ್ಲಿ ತೊಡಗಿದ್ದ ಆರೋಪದಲ್ಲಿ ಬಂಧನವಾಗಿರುವ ರೌಡಿಶೀಟರ್ ವಿ.ನಾಗರಾಜ್‌ನನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು, ತಮಿಳುನಾಡಿನ ಪರಿಚಿತ ಐವರು ಎನ್‌ಆರ್‌ಐಗಳ ಮೂಲಕ ಹಳೆ ನೋಟು ಬದಲಾವಣೆ ಮಾಡಲು ಮುಂದಾಗಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 ನಾಗರಾಜ್‌ನನ್ನು ತೀವ್ರ ವಿಚಾರಣೆ ಗೊಳಪಡಿಸಿದ್ದು, 40ಕ್ಕೂ ಹೆಚ್ಚು ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇದರಲ್ಲಿ ನೋಟು ಬದಲಾವಣೆ ದಂಧೆ ಹಾಗೂ ಉದ್ಯಮಿ ಉಮೇಶ್ ಅಪಹರಣ, ಕೊಲೆ ಯತ್ನ ಪ್ರಕರಣಗಳು ಗಂಭೀರವಾಗಿ ಪರಿಗಣಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂದಿನ ವಿಧಾಸಭಾ ಚುನಾವಣೆಗೆ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಗರಾಜ್ ನಿರ್ಧರಿಸಿದಲ್ಲದೆ, ಇದಕ್ಕಾಗಿ ಹಣ ಸಂಗ್ರಹಿಸಲು ನೋಟು ಬದಲಾವಣೆ ದಂಧೆಗೆ ಮುಂದಾಗಿದ್ದ ಎನ್ನಲಾಗಿದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚು ಸಮಾಜ ಸೇವಕನಂತೆ ಬಿಂಬಿಸಿಕೊಳ್ಳುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ನಾಗ ಹಾಗೂ ಆತನ ಇಬ್ಬರು ಮಕ್ಕಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಮೂವರನ್ನು ಪ್ರತ್ಯೇಕವಾಗಿ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
 ಸಮಾಜ ಸೇವಕ: ನಾಗರಾಜ್ ಈ ಹಿಂದೆ ಶ್ರೀರಾಮಪುರದಲ್ಲಿ ಹಾಲು ಮಾರಾಟ ಮಾಡುತ್ತಿದ್ದ. ಆ ಸಂದರ್ಭದಲ್ಲಿ ಆತನಿಗೆ ಹಲವಾರು ಮಂದಿ ಸ್ನೇಹಿತರಿದ್ದರು. ಅವರ ಪ್ರಭಾವದ ಮೂಲಕ ಬಿಬಿಎಂಪಿ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸಿದ್ದ. ಸಾಮಾನ್ಯ ಪೊಲೀಸ್ ಪೇದೆಯಿಂದ ಹಿಡಿದು ಸಂಸದರ ಪ್ರಭಾವ ಹೊಂದಿದ್ದ. ಅಲ್ಲದೆ, ತನ್ನ ಮನೆಯ ಸಮೀಪದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ತಿಳಿದುಬಂದಿದೆ.
     
ಸ್ಥಳೀಯರು ಯಾರೇ ಮತಪಟ್ಟರೂ ಅವರ ಕುಟುಂಬಗಳಿಗೆ 10 ಸಾವಿರ ರೂ. ಧನ ಸಹಾಯ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಅವರ ವಿಶ್ವಾಸಗಳಿಸಿಕೊಳ್ಳುತ್ತಿದ್ದ. ಇದರಿಂದಾಗಿ ಸ್ಥಳೀಯರು ಸದಾ ನಾಗನ ಬೆಂಬಲಕ್ಕೆ ನಿಂತಿದ್ದರು. ನಾಗರಾಜ್‌ನ ಪತ್ನಿ ಲಕ್ಷ್ಮೀಯೂ ಒಂದು ಬಾರಿ ಕಾರ್ಪೊರೇಟರ್ ಆಗಿದ್ದು, ಸಾಕಷ್ಟು ಜನರ ಬೆಂಬಲ ಹೊಂದಿದ್ದರು.

ವಿಚಾರಣೆಗೆ ಸಹಕಾರ: ಜಾಮೀನು ಸಿಗುತ್ತದೆ ಎಂಬ ಗುಂಗಿನಲ್ಲಿ ತಲೆಮರೆಸಿಕೊಂಡಿದ್ದು ಎಂದು ವಿಚಾರಣೆ ವೇಳೆ ನಾಗರಾಜ್‌ ತಿಳಿಸಿದ್ದು, ಪೊಲೀಸರ ಕಾಲಿಗೆ ಬಿದ್ದು, ಪರಿ ಪರಿಯಾಗಿ ತನ್ನನ್ನು ಏನೂ ಮಾಡದಂತೆ ಅಂಗಲಚಿದ್ದಾನೆ. ಮೊದಲು ತನಿಖೆಗೆ ಸರಿಯಾಗಿ ಸ್ಪಂದಿಸದೆ, ತನಿಖೆಯ ಹಾದಿ ತಪ್ಪಿಸುತ್ತಿದ್ದ ನಾಗ ಈಗ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X