ಬೈಕ್ ಢಿಕ್ಕಿ: ಮಹಿಳೆ ಮೃತ್ಯು
ಸಾಗರ, ಮೇ 14: ಆನಂದಪುರಂನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ವೃದ್ದೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ವೃದ್ದೆ ಮೃತಪಟ್ಟ ಘಟನೆ ನಡೆದಿದೆ.
ಆನಂದಪುರಂನ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಲಂದೂರು ಗ್ರಾಮದ ವಾಸಿ ಲಕ್ಷ್ಮಮ್ಮ (70) ಎಂಬುವವರಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರೆಂದು ಪ್ರಕರಣ ದಾಖಲಿಸಿಕೊಂಡಿರುವ ಇಲ್ಲಿನ ಠಾಣೆ ಪೊಲೀಸರು ತಿಳಿಸಿದ್ದಾರೆ.
Next Story





