ಪುತ್ತೂರು, ಮೇ 15: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಆರ್ಯಾಪು ಗ್ರಾಮದ ಬೊಳ್ಳಲ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಗಣೇಶ್ ಸಫಲ್ಯ ಪುತ್ರ ಸದಾನಂದ (27) ಸದಾನಂದ ಎಂಬವರು ಮಲಗಿದ್ದ ವೇಳೆ ತಡರಾತ್ರಿ ಸಿಡಿಲು ಬಡಿದಿದೆ. ಪರಿಣಾಮ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.