ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ
ದ್ವಿತೀಯ ಪಿಯುಸಿ ಫಲಿತಾಂಶ

ಬಂಟ್ವಾಳ, ಮೇ 15: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ಕಲ್ಲಡ್ಕ ಉತ್ತಮ ಸಾಧನೆ ಮಾಡಿದೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 54 ವಿದ್ಯಾರ್ಥಿನಿಯರಲ್ಲಿ 10 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದರೆ, 33 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಶೇ 100 ಫಲಿತಾಂಶ ದಾಖಲಾಗಿದೆ.
ಕಲಾ ವಿಭಾಗದಲ್ಲಿ 32 ಮಂದಿಯಲ್ಲಿ 30 ಮಂದಿ ತೇರ್ಗಡೆ ಹೊಂದಿದ್ದಾರೆ. ಓರ್ವ ವಿದ್ಯಾರ್ಥಿನಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದರೆ, 24 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಶೇ 94 ಫಲಿತಾಂಶ ದಾಖಲಾಗಿದೆ.
ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಮತ್ತು ಉಪನ್ಯಾಸಕಿ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Next Story





