Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರದ ಕಸ-ತ್ಯಾಜ್ಯ ನೀರು ಸಮಸ್ಯೆ...

ನಗರದ ಕಸ-ತ್ಯಾಜ್ಯ ನೀರು ಸಮಸ್ಯೆ ಉಲ್ಬಣಕ್ಕೆ ಹಿಂದಿನ ಸರಕಾರಗಳು ಕಾರಣ: ಸಿದ್ದರಾಮಯ್ಯ

ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ15 May 2017 8:22 PM IST
share
ನಗರದ ಕಸ-ತ್ಯಾಜ್ಯ ನೀರು ಸಮಸ್ಯೆ ಉಲ್ಬಣಕ್ಕೆ ಹಿಂದಿನ ಸರಕಾರಗಳು ಕಾರಣ: ಸಿದ್ದರಾಮಯ್ಯ

ಬೆಂಗಳೂರು, ಮೇ 15: ನಗರದಲ್ಲಿ ತಲೆದೋರಿರುವ ಕಸ ಹಾಗೂ ತ್ಯಾಜ್ಯ ನೀರು ಸಮಸ್ಯೆ ಉಲ್ಬಣವಾಗಿರುವುದಕ್ಕೆ ಈ ಹಿಂದಿನ ಎಲ್ಲ ಸರಕಾರಗಳು ಕಾರಣವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
 

ಸೋಮವಾರ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಜೈಕಾ ಅನುದಾನದಡಿ ಕೋರಮಂಗಲ ಮತ್ತು ಚಲ್ಲಘಟ್ಟ ಕಣಿವೆಯಲ್ಲಿ ಹೊಸದಾಗಿ ನಿರ್ಮಿಸಿರುವ 60ಎಂಎಲ್‌ಡಿ ಸಾಮರ್ಥ್ಯದ ತ್ಯಾಜ್ಯನೀರು ಸಂಸ್ಕರಣಾ ಘಕಟವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ಹೇಗೆ ನಿರ್ವಹಣೆ ಮಾಡಬೇಕೆಂದು ಈ ಹಿಂದಿನ ಯಾವ ಸರಕಾರಗಳು ಚಿಂತಿಸಿಲ್ಲ. ಇದರಿಂದಾಗಿ ಪ್ರಸ್ತುತ ನಗರದಲ್ಲಿ ಕಸದ ನಿರ್ವಹಣೆಯೇ ದೊಡ್ಡ ಸಮಸ್ಯೆಯಾಗಿದ್ದು, ಪ್ರತಿದಿನ 4 ಸಾವಿರ ಟನ್ ಕಸ ಉತ್ಪತ್ತಿಯಾಗುತ್ತದೆ. ಈ ಕಸವನ್ನು ಸಮರ್ಪಕವಾಗಿ ನಿರ್ವಹಿಸಲು ನಮ್ಮ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.

 ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ 7 ತ್ಯಾಜ್ಯ ಸಂಸ್ಕರಣ ಘಟಕಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ ಉತ್ಪತ್ತಿಯಾಗುವ ಗೊಬ್ಬರವನ್ನು ರೈತರಿಗೆ ಸರಬರಾಜು ಮಾಡಲು ಕೃಷಿ ಇಲಾಖೆ ಮುಂದಾಗಿದೆ. ಇದರ ಜೊತೆಗೆ ಕಸ ಸಂಸ್ಕರಣ ಘಟಕದಲ್ಲಿ ಕಸದಿಂದ ವಿದ್ಯುತ್ ತಯಾರಿಸಲು ಜರ್ಮನಿ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಜಿಎಸ್‌ಟಿ ಸೂಚನೆಗೂ ಮೊದಲೇ ಯೋಜನೆ ತಯಾರಿ: ಬೆಳ್ಳಂದೂರು ಕೆರೆಯ ಶುದ್ಧೀಕರಣಕ್ಕೆ ಜಿಎಸ್‌ಟಿ (ಹಸಿರು ನ್ಯಾಯ ಪೀಠ) ಸೂಚಿಸುವ ಏಳು ತಿಂಗಳ ಮೊದಲೆ ರಾಜ್ಯ ಸರಕಾರ ತಜ್ಞರ ಸಮಿತಿಯೊಂದನ್ನು ರಚಿಸಿ ಕೆರೆಯ ಶುದ್ಧೀಕರಣಕ್ಕೆ ಸಲಹೆಗಳನ್ನು ಪಡೆದು ಕಾರ್ಯ ಪ್ರವೃತ್ತರಾಗಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೊದಲ ಹಂತವಾಗಿ ಬೆಳ್ಳಂದೂರು ಹಾಗೂ ವರ್ತೂರು ಕೆರೆಯನ್ನು ಸಂಪೂರ್ಣವಾಗಿ ಶುದ್ಧೀಕರಿಸಲು ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತದನಂತರ ರಾಮ್‌ಪುರ ಕೆರೆ ಸೇರಿದಂತೆ ನಗರದ ಪ್ರತಿಯೊಂದು ಕೆರೆಯ ಸ್ವಚ್ಛತೆಯನ್ನು ಹಂತ, ಹಂತವಾಗಿ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

110 ಹಳ್ಳಿಗೆ ಕುಡಿಯುವ ನೀರು: ಬಿಬಿಎಂಪಿಗೆ ಹೊಸದಾಗಿ ಸೇರಿರುವ 110 ಹಳ್ಳಿಗಳಿಗೆ ಕುಡಿಯುವ ನೀರಿನ್ನು ಒದಗಿಸುವ ನಿಟ್ಟಿನಲ್ಲಿ ಜೈಕಾ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯದಲ್ಲಿ 65 ಲಕ್ಷ ವಾಹನಗಳಿದ್ದು, ಸಂಚಾರ ದಟ್ಟಣೆಯನ್ನು ನಿರ್ವಹಿಸಲು ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಮುಂದಿನ ತಿಂಗಳಲ್ಲಿ 42 ಕಿಮೀ ಉದ್ದದ ಎರಡನೆ ಹಂತದ ಮೆಟ್ರೋ ರೈಲಿಗೆ ಚಾಲನೆ ಸಿಗಲಿದೆ. ನಗರದ ಇತರೆ ಭಾಗಗಳಲ್ಲಿ ಆಧುನಿಕ ಶೈಲಿಯಲ್ಲಿ ರಸ್ತೆ ನಿರ್ಮಾಣಕ್ಕೆ ಜೈಕಾ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಬಿಬಿಎಂಪಿ ಮೇಯರ್ ಪದ್ಮಾವತಿ, ಜಪಾನ್ ರಾಯಭಾರಿ ಕೆಂಜಿ ಇರಾಮಟ್ಟು, ಶಾಸಕ ಅರವಿಂದ ಲಿಂಬಾವಳಿ, ಶಾಂತಿ ನಗರದ ಶಾಸಕ ಹಾರಿಸ್, ಜಪಾನ್ ದೂತವಾಸ ಕಚೇರಿಯ ಟಕಾಯುಕಿ ಕಿಟಾಗವ ಹಾಗೂ ಬೆಂಗಳೂರು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಮತ್ತಿತರರಿದ್ದರು.

ಬೆಂಗಳೂರಿಗೆ ಅಗತ್ಯವಾದ ಕುಡಿಯುವ ನೀರಿನ ಘಟಕ, ರಸ್ತೆ ನಿರ್ಮಾಣಕ್ಕೆ ಅಗತ್ಯವಾದ ಆರ್ಥಿಕ ನೆರವನ್ನು ಜೈಕಾ ವತಿಯಿಂದ ನೀಡಲಾಗುವುದು. ಈಗಾಗಲೆ ಜಪಾನಿನ ಹಲವು ಕಂಪೆನಿಗಳು ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿದ್ದು, ಆ ಮೂಲಕ ಭಾರತ-ಜಪಾನ್ ನಡುವೆ ಬಾಂಧವ್ಯ ಗಟ್ಟಿಗೊಳಿಸಲಾಗುವುದು.
-ಕೆಂಜಿ ಇರಾಮಟ್ಟು, ಜಪಾನ್ ರಾಯಭಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X